ಒಬ್ಬ ಸಚಿವನಾಗಿ ಸಾಯಿ ಎಂದಿದ್ದು ಸರಿಯಲ್ಲ : ಕತ್ತಿ ಹೇಳಿಕೆಗೆ ಸಿಎಂ ವಿಷಾದ
ಬೆಂಗಳೂರು : ಸಹಾಯ ಕೇಳಿದ ರೈತನಿಗೆ “ಸಾಯೋದು ಒಳ್ಳೆಯದು” ಎಂದು ಹೇಳಿಕೆ ನೀಡಿ ಎಲ್ಲರ ಕೆಂಗೆಣ್ಣಿಗೆ ಕಾರಣವಾಗಿರುವ ಉಮೇಶ್ ಕತ್ತಿ ನಡುವಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ಹೊರಹಾಕಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಸಾಯಬೇಕೇ ಬದುಕಬೇಕೇ ಎಂದು ಕೇಳಿದ್ದಕ್ಕೆ ಸಾಯಿ ಎಂದು ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ ಎಂದು ತಮ್ಮ ಸಚಿವರ ಹೇಳಿಕೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದಾರೆ.
ಜೊತೆಗೆ ಆ ಭಾಗದಲ್ಲಿರುವ ಜನರಿಗೆ ಗೋದಿಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಸಾಯಬೇಕೇ ಬದುಕಬೇಕೇ ಎಂದು ಕೇಳಿದ್ದಕ್ಕೆ ಸಾಯಿ ಎಂದು ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ.
ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು.ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.










