ನವದೆಹಲಿ : ದೇಶದಲ್ಲಿ ಕೊರೊನಾಸುರನ ಅಬ್ಬರ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 12 ಸಾವಿರ ತಲುಪಿದೆ. ಇದುವರೆಗೆ ಕೊರೊನಾಸುರನಿಗೆ 414 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37 ಮಂದಿಯನ್ನು ವೈರಸ್ ಬಲಿ ಪಡೆದಿದೆ. ದೇಶಾದ್ಯಂತ ಒಟ್ಟು 12,380 ಮಂದಿ ಕೊರೊನಾ ವೈರಸ್ ಗೆ ತುತ್ತಾಗಿದ್ದಾರೆ.
ನವದೆಹಲಿ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಅರಿವಳಿಕೆ ತಜ್ಞರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತದಲ್ಲಿ ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ನವದೆಹಲಿ ಎರಡನೇ ಸ್ಥಾನದಲ್ಲಿದ್ದು, ಬುಧವಾರದ ಅಂಕಿ ಅಂಶಗಳ ಪ್ರಕಾರ ನವದೆಹಲಿಯಲ್ಲಿ 30 ಮಂದಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದಾರೆ. ಇನ್ನು, 1,561 ಜನರಲ್ಲಿ ಸೋಂಕು ಪತ್ತೆಯಾಗಿದೆ.








