ಇಂದಿನಿಂದ ಮೇ 3 ರವರೆಗೆ ರಾಜ್ಯದಲ್ಲಿ ಭಾರಿ ಮಳೆ Heavy rains
ಬೆಂಗಳೂರು : ಕೊರೊನಾ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಮೇ ಮೂರರವರೆಗೂ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಮುಂದಿನ ಐದು ದಿನಗಳ ಕಾಲ ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.










