ಕೊರೊನಾ ಹೊಡೆತಕ್ಕೆ ವಿಶ್ವವೇ ನಲುಗುತ್ತಿದೆ. ಈ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಅನೇಕ ದೇಶಗಳು ಪರದಾಡುತ್ತಿವೆ. ಇದಕ್ಕೆ ಭಾರತ ಹೊರತಲ್ಲ. ಕೊರೊನಾ ವೈರಸ್ ಹರಡದಂತೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಹಾಗಾಗಿ ಸಾಕಷ್ಟು ವಲಸೆ ಕಾರ್ಮಿಕರಿಗೆ ತೊಂದರೆ ಆಗಿದೆ. ಈ ಹಿನ್ನೆಲೆಯಲ್ಲಿ ಮೂಲ ಸೌಕರ್ಯ, ಕಾರ್ಮಿಕರ ಸಮಸ್ಯೆ, ಆಹಾರ ವಿತರಣೆ, ಕಾನೂನು ಸುವ್ಯವಸ್ಥೆ ನೋಡಿಕೊಳ್ಳಲು ನಾಲ್ವರು ಹಿರಿಯ ಸಚಿವರಿಗೆ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿದ್ದಾರೆ. ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ನಿಯಂತ್ರಣ ಕುರಿತು ವಿಶೇಷ ಜವಾಬ್ದಾರಿ ನೀಡಿದ್ದಾರೆ. ಜೊತಗೆ ಮುಂಬೈನಲ್ಲಿ ನಡೆಯುತ್ತಿರುವ ಕಾರ್ಮಿಕರ ಪ್ರತಿಭಟನೆ ರಾಜ್ಯದಲ್ಲಿ ಆಗದಂತೆ ಮುನ್ನೆಚ್ಚರಿಕೆ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ವಲಸೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವ ಸುರೇಶ್ ಕುಮಾರ್ ಗೆ ಜವಬ್ದಾರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಣಾಮಕಾರಿಯಾಗಿ ಕಾಪಾಡಿಕೊಳ್ಳುವ ಜವಬ್ದಾರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನೀಡಲಾಗಿದೆ. ಡಿಸಿಎಂ ಡಾ.ಅಶ್ವತ್ಥನಾರಾಯಣ್ ಗೆ ಕೃಷಿ ವಲಯದ ಜವಾಬ್ದಾರಿ ಮತ್ತು ಅಗತ್ಯ ವಸ್ತುಗಳ ಸಪ್ಲೈ ಚೈನ್ ನಿರ್ವಹಣೆ ಹಂಚಿಕೆ ಮಾಡಿದ್ದಾರೆ. ಸಚಿವ ಅಶೋಕ್ ಅವರಿಗೆ ಬೆಂಗಳೂರು ನಗರದ ಉಸ್ತುವಾರಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ನಿರ್ವಹಣೆ ಮತ್ತು ಕೊರೊನಾ ಸಂಬಂಧಿತ ಜವಾಬ್ದಾರಿ ವಹಿಸಿದ್ದಾರೆ. ಸಚಿವರಿಗೆ ಆಯಾಯ ಇಲಾಖೆಗಳ ಜೊತೆಗಿನ ಸಮನ್ವಯದೊಂದಿಗೆ ರಾಜ್ಯ ವ್ಯಾಪಿ ಯಾವುದೇ ಸಮಸ್ಯೆಯಾಗದಂತೆ ಜವಾಬ್ದಾರಿ ನಿರ್ವಹಿಸುವಂತೆ ಸಿಎಂ ಸೂಚಿಸಿದ್ದಾರೆ. ಅಲ್ಲದೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಇಲಾಖೆಗಳಿಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎನ್ನಲಾಗಿದೆ.
ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜನಾಕ್ರೋಶ
ಮಂಡ್ಯ: ಭಾರತ ಸಂವಿಧಾನದ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಈಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....








