ಬಿಹಾರ್: ಮಹಾಮಾರಿ ಕೊರೊನಾ ವೈರಸ್ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದರೆ, ಅವರ ಮೇಲೆಯೇ ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಬಿಹಾರದ ಪೂರ್ವ ಚಂಪಾರನ್ನಲ್ಲಿ ನಡೆದಿದೆ. ಈ ಸಿಬ್ಬಂದಿ ಗ್ರಾಮಕ್ಕೆ ತೆರಳುತ್ತಿದ್ದಂತೆಯೇ ಗ್ರಾಮಸ್ಥರು ತಡೆದು ಹಲ್ಲೆ ನಡೆಸಿದ್ದು ಘಟನೆಯಲ್ಲಿ ಹಲವಾರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಏನಿದು ಘಟನೆ?
ಬಿಹಾರದಲ್ಲಿ ಜನರು ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿ ಬೇಕಾಬಿಟ್ಟೆಯಾಗಿ ಓಡಾಡುತ್ತಿರುವ ಕಾರಣದಿಂದ ಈಗಾಗಲೇ ರಾಜ್ಯದಲ್ಲಿ 70 ಸಾವು ಸಂಭವಿಸಿದೆ. ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಶರವೇಗದಲ್ಲಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬುದ್ಧಿಮಾತನ್ನು ಹೇಳುವ ಮೂಲಕ, ಜೀವವನ್ನು ಕಾಪಾಡಿಕೊಳ್ಳುವ ಬಗ್ಗೆ ತಿಳಿಸಲು ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿ ಚಂಪಾರನ್ ಗೆ ತೆರಳಿದ್ದರು. ಆದರೆ ಏಕಾಏಕಿ ಗ್ರಾಮಸ್ಥರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








