ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕ್ಷಿಪ್ರಗತಿಯಲ್ಲಿ ಹರಡುತ್ತಿದ್ದು, ಇಂದು 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೇ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಬೆಂಗಳೂರಿನ ಐವರಿಗೆ, ಬೆಳಗಾವಿಯ 17 ಜನರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ಮೈಸೂರಿನ ಮೂವರಿಗೆ ಮತ್ತು ವಿಜಯಪುರದ ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.








