ಉದಯಿಸಿದ ಸೂರ್ಯ : ಎಂ.ಕೆ.ಸ್ಟಾಲಿನ್ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್ MK Stalin’s
ಚೆನ್ನೈ : ದ್ರಾವಿಡರ ನಾಡು ತಮಿಳುನಾಡಲ್ಲಿ ಡಿಎಂಕೆ ಪಕ್ಷ ಅಧಿಕಾರಕ್ಕೆ ಬರೋದು ಬಹುತೇಕ ಖಚಿವಾಗಿದೆ. ತಮಿಳುನಾಡಿದ 140 ಕ್ಷೇತ್ರಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಡೇಟ್ ಫಿಕ್ಸ್ ಆಗಿದೆ.

ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮೇ 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕಿದೆ. ಸದ್ಯ 141 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ.









