ಮೂರನೇ ಬಾರಿ ಸಿಎಂ ಆಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ
ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಮೂರನೇ ಬಾರಿಗೆ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೋವಿಡ್ ಕಾರಣದಿಂದ ಕೆಲವು ಆಹ್ವಾನಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಪ್ರಮಾಣ ವಚನದ ಬಳಿಕ ಸಿಎಂ ಮಮತಾ ನಬನ್ನಾದಲ್ಲಿ ಕೋಲ್ಕತ್ತಾ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಟಿಎಂಸಿ ಶಾಸಕರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥಾ ಚಟರ್ಜಿ ಹೇಳಿದ್ದಾರೆ.
ಟಿಎಂಸಿ ಶಾಸಕರು ಹಿಂದಿನ ಸರ್ಕಾರದ ನಿರ್ಗಮಿತ ಸ್ವೀಕರ್ ಬಿಮನ್ ಚಟರ್ಜಿ ಅವರನ್ನೇ ಹಂಗಾಮಿ ಸ್ವೀಕರ್ ಆಗಿ ಆಯ್ಕೆ ಮಾಡಿದ್ದಾರೆ.
ಹೊಸದಾಗಿ ಆಯ್ಕೆಯಾದ ಶಾಸಕರು ಮೇ 6ರಿಂದ ವಿಧಾನಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪಶ್ಚಿಮ ಬಂಗಾಳದ ಒಟ್ಟು 292 ವಿಧಾನಸಭಾ ಸ್ಥಾನಗಳ ಪೈಕಿ 213 ಸ್ಥಾನಗಳನ್ನು ಗೆದ್ದುಕೊಂಡಿದೆ.