ನಿಮಗೆ ಕಣ್ಣು ಕಾಣಲ್ಲ, ಕಿವಿ ಕೇಳಿಸಲ್ಲ, ಪ್ರಸೆನ್ಸ್ ಆಫ್ ಮೈಡ್ ಇಲ್ಲ – ಸಿಎಂ ವಿರುದ್ಧ ಹೆಚ್ ವಿಶ್ವನಾಥ್ ಕಿಡಿ
ಮೈಸೂರು : ನಿಮಗೆ ಕಣ್ಣು ಕಾಣಲ್ಲ, ಕಿವಿ ಕೇಳಿಸಲ್ಲ, ಪ್ರಸೆನ್ಸ್ ಆಫ್ ಮೈಡ್ ಇಲ್ಲ. ನಿಮ್ಮನ್ನ ಕಟ್ಟಿಕೊಂಡು ನಾವೇನ್ ಮಾಡೋಣ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ MLC ಹೆಚ್ .ವಿಶ್ವನಾಥ್ ವಾಗ್ದಾಳಿ ನಡೆಸಿದ್ಧಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ಸೋತಿದೆ. ಮುಖ್ಯಮಂತ್ರಿಯೂ ಸರಿ ಇಲ್ಲ. ಮುಖ್ಯಮಂತ್ರಿ ಬಳಿ ಹೋಯ್ತು ಅಂದ್ರೆ ಆ ಖಾತೆ ಸತ್ತು ಹೋಯ್ತು ಅಂತ ಅರ್ಥ. ನೀವೇ ಬಿಬಿಎಂಪಿ ಸಚಿವರಾಗಿದ್ದೀರಿ. ರಾಜಧಾನಿ ಬೆಂಗಳೂರು ಕೋವಿಡ್ನಿಂದ ತತ್ತರಿಸಿ ಹೋಗುತ್ತಿದೆ. ನೀವು ಎಂದಾದರೂ ಆಚೆ ಬಂದು ನೋಡಿದ್ದೀರಾ. ಬಿಬಿಎಂಪಿಗೆ ಹೋಗಿ ಸಭೆ ಮಾಡಿದ್ದೀರಾ. ಇಂಧನ ನಿಮ್ಮ ಬಳಿಯೇ ಇದೆ, ಡಿಪಿಆರ್ ನಿಮ್ಮ ಬಳಿಯೇ ಇದೆ. ಎಲ್ಲ ಖಾತೆಯನ್ನೂ ಇಟ್ಟುಕೊಂಡು ಏನು ಮಾಡುತ್ತಿದ್ದೀರಾ ಎಂದು ಆಕ್ರೋಶಭರಿತವಾಗಿ ಪ್ರಶ್ನೆ ಮಾಡಿದ್ದಾರೆ.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.








