ಕೇರಳದಲ್ಲಿ ಮೇ 8ರಿಂದ ಸಂಪೂರ್ಣ ಲಾಕ್‍ಡೌನ್ : ಪಿಣರಾಯಿ ವಿಜಯನ್ lockdown
ತಿರುವನಂತಪುರಂ : ಕೇರಳದಲ್ಲಿ ಕೊರೊನಾ ಸೋಂಕಿತರ ಹೆಚ್ಚಾಗುತ್ತಿರುವ ಹಿನ್ನೆಲೆ ಮೇ 8 ರಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಪಿಣರಾಯಿ, ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ.
ಹಾಗಾಗಿ ಮೇ 8 ರ ಬೆಳಗ್ಗೆ 6 ಗಂಟೆಯಿಂದ ಮೇ 16ರ ವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಿನ್ನೆ ಕೇರಳದಲ್ಲಿ 41,953 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 58 ಸಾವು ಸಂಭವಿಸಿದೆ.
ಈ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.