ಕರ್ನಾಟಕಕ್ಕೆ ಆಕ್ಸಿಜನ್ ಪೂರೈಕೆ ಮಾಡಲ್ಲ ಎಂದ ಕೇಂದ್ರಕ್ಕೆ ಮುಖಭಂಗ – ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್
ಕರ್ನಾಟಕಕ್ಕೆ ಆಕ್ಸಿಜನ್ ಪೂರೈಕೆ ಮಾಡದೇ ಪಕ್ಷಪಾತ ನಿಲುವು ತಾಳಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ತೀವ್ರ ಮುಖಭಂಗವಾಗಿದೆ. ಕರ್ನಾಟಕದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತೊಪಟ್ಟಿದ್ದ ಬಳಿಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಈ ಕುರಿತಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು.. ಅಲ್ಲದೇ ರಾಜ್ಯಕ್ಕೆ ಹೆಚ್ಚುವರಿ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು..
ಆದ್ರೆ ಹೈಕೋರ್ಟ್ ಆದೇಶಕ್ಕೆ ತಲೆಕೆಡಿಸಿಕೊಳ್ಳದ ಕೇಂದ್ರ ಆಮ್ಲಜನಕ ಪೂರೈಕೆ ಮಾಡದೇ ಇರುವ ನಿರ್ಧಾರ ಮಾಡಿತ್ತು.. ಅಲ್ಲದೇ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು..ಆದ್ರೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲ್ಲ ಎಂದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶ ನೀಡಿರುವ ಬಗ್ಗೆ ಮಧ್ಯಪ್ರವೇಶ ಮಾಡಲ್ಲ ಎಂದು …
ಹೇಳಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ತಪ್ಪಲ್ಲ. 1,200 ಮೆಟ್ರಿಕ್ ಟನ್ ಆಮ್ಲಜನಕ ನೀಡುವಂತೆ ಹೈಕೋರ್ಟ್ ನೀಡಲಾಗಿದೆ… ಆಮ್ಲಜನಕದ ಬೇಡಿಕೆ ಪರಿಷ್ಕರಿಸಲು ಕರ್ನಾಟಕ ಸರ್ಕಾರ ಮಾಡಿದ ಮನವಿಯಲ್ಲಿ ಹೈಕೋರ್ಟ್ ತೀರ್ಮಾನವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ 1,200 ಮೆಟ್ರಿಕ್ ಟನ್ ಆಮ್ಲಜನಕ ನೀಡುವಂತೆ ಹೇಳಿತ್ತು… ಕರ್ನಾಟಕದ ಜನರನ್ನು ಕಷ್ಟಕ್ಕೆ ದೂಡಲು ಸಾಧ್ಯವಿಲ್ಲ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಸರಿ ಇದೆ ಎಂದು ಸುಪ್ರೀಂಕೋರ್ಟ್ ಹೇಳಿದ್ದು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.







