ಜಮ್ಮು: ಕೊರೊನಾ ಭೀತಿಯ ನಡುವೆ ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಆರಂಭವಾದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಶೋಪಿಯಾನ್ ಜಿಲ್ಲೆಯ ಡೈರೂ ಎಂಬಲ್ಲಿ ಗುಂಡಿನ ಚಕಮಕಿ ನಡೆದಿದ್ದು ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿಯಿಂದ ತಿಳಿದುಬಂದಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರು 44 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಪಡೆಯ ಸಹಾಯದೊಂದಿಗೆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ಆರಂಭಿಸಿದರು. ಈ ಹಂತದಲ್ಲಿ ಗುಂಡಿನ ಚಕಮಕಿ ನಡೆದು ಓರ್ವ ಉಗ್ರ ಹತನಾಗಿದ್ದಾನೆ.








