ಕೋವಿಡ್ ಸೋಂಕಿತ ಬಾಲಕಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನ
ಮಧ್ಯಪ್ರದೇಶ : ಕೋವಿಡ್ ಸೋಂಕಿತ ಬಾಲಕಿಕಿಗೆ ಕಿರುಕುಳ ನೀಡಿದ ಆರೋಪದಡಿ ಇಬ್ಬರು ವಾರ್ಡ್ ಬಾಯ್ ಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಇಂದೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ಶುಭಂ ಮತ್ತು ಹೃದಯೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಆಸ್ಪತ್ರೆಯ ಕೋವಿಡ್ ವಾರ್ಡ್ ವಿಭಾಗದಲ್ಲಿ ಕೊರೋನಾ ಸೋಂಕಿತ ಬಾಲಕಿಗೆ ಕಿರುಕುಳ ನೀಡಿದ್ದಾರೆ. ಮೇ 5 ಮತ್ತು ಮೇ 6 ರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಇಂದೋರ್ ನ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಬಾಗ್ರಿ ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದು, ಆ ವೇಳೆ ಇಬ್ಬರೂ ಆರೋಪಿಗಳು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಬಳಿಕ ಕುಟುಂಬಸ್ಥರು ಸನ್ಯೋಗಿತಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.