ಕೊರೊನಾ ಸೋಂಕಿತರಿಗೆ ನೆರವಾದ ರವೀನಾ…. ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ
ಮುಂಬೈ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಬಾಲಿವುಡ್ ನ ನಟಿ ರವೀನಾ ಟಂಡನ್ ಕೋವಿಡ್ ಸೋಂಕಿತರಿಗೆ ಸಹಾಯ ಮಾಡಿದ್ಧಾರೆ. ದೆಹಲಿಯ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತಂತೆ ಕೆಲವೊಂದಷ್ಟು ಫೋಟೋಗಳನ್ನು ಸೋಶಿಯಲ್ ಮೀಡಿಯಾ ಹಂಚಿಕೊಂಡಿದ್ದಾರೆ.
ರವೀನಾ ಟಂಡನ್ ರ ರುದ್ರ ಫೌಂಡೇಶನ್ ಎಂಬ ತಂಡವೊಂದನ್ನು ರಚಿಸಿ, ಆಕ್ಸಿಜನ್ ಸಿಲಿಂಡರ್ಗಳನ್ನು ದಾನ ಮಾಡಿದ್ದಾರೆ. ಮುಂಬೈನಿಂದ ಮೊದಲ ಬಾರಿಗೆ ಆಕ್ಸಿಜನ್ ಸಿಲಿಂಡರ್ಗಳನ್ನು ದೆಹಲಿಗೆ ಕಳುಹಿಸುತ್ತಿರುವ ಫೋಟೋಗಳನ್ನು ರವೀನಾ ಟಂಡನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ತಂಡವು ದೆಹಲಿ ಪೂರ್ತಿ ಸುತ್ತಾಡಿದೆ. ಸಾಗರದಲ್ಲಿನ ಒಂದು ಹನಿಗಾಗಿ, ಆದರೆ ಇದು ಕನಿಷ್ಠ ಸ್ವಲ್ಪ ಮಂದಿಗಾದರೂ ಸಹಾಯವಾಗುತ್ತದೆ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.








