ರಾಜ್ಯದಲ್ಲಿ ಕೊರೊನಾಸುರನ ಅಟ್ಟಹಾಸ ಮುಂದುವರೆದಿದೆ. ದಿನ ದಿಂದ ದಿನಕ್ಕೆ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧದ ಕಚೇರಿಗೆ ಆಗಮಿಸಿದ್ದಾರೆ. ಇಂದು ದಿನ ಪೂರ್ತಿ ವಿಧಾನಸೌಧ ತಮ್ಮ ಕಚೇರಿಯಲ್ಲಿ ಇದ್ದು ಕೊರೋನಾ ಸಂಬಂಧ ಸರ್ಕಾರ ಕೈಗೊಂಡಿರುವ
ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಹಾಗಾಗಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








