ಎಚ್ಚರ… ವಾಹನ ಸೀಜ್ ಆದ್ರೆ 14 ದಿನ ಸಿಗಲ್ಲ..!
ಶಿವಮೊಗ್ಗ : ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಇದ್ರಿಂದಾಗಿ ಜನರು ಆತಂಕಗೊಂಡಿದ್ದಾರೆ.
ಮತ್ತೊಂದೆಡೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ… ಕಠಿಣ ನಿಯಮಗಳನ್ನೂ ಜಾರಿಗೊಳಿಸಿದೆ.. ಸುಖಾಸುಮ್ಮನೆ ವಾಹನಗಳನ್ನ ರಸ್ತೆಗಿಳಿಸಿದ್ರೆ ವಾಹನ ಸವಾರರಿಗೆ ಲಾಠಿ ರುಚಿ ತೋರಿಸುವುದು ಪಕ್ಕಾ.. ಅದ್ರ ಜೊತೆಗೆ ಪೊಲೀಸರು ವಾಹನಗಳನ್ನೂ ಸೀಜ್ ಮಾಡಲಿದ್ದಾರೆ.. ಹೀಗೆ ವಾಹನಗಳನ್ನೇನಾದರೂ ಸೀಜ್ ಮಾಡಿದರೆ 14 ದಿನಗಳ ಕಾಲ ವಾಪಸ್ ಮಾಡುವುದಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಎಚ್ಚರಿಸಿದ್ಧಾರೆ.
ನಾಳೆಯಿಂದ 14 ದಿನಗಳವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದ್ದು ಸರ್ಕಾರದ ಈ ಆದೇಶವನ್ನು ಎಲ್ಲರೂ ಪಾಲಿಸಲೇಕಾಗಿದೆ. ಲಾಕ್ಡೌನ್ ವೇಳೆ ಕಾರು, ಆಟೋ, ಬೈಕ್ಗಳನ್ನು ಓಡಿಸಿದರೆ ಜಪ್ತಿ ಮಾಡಲಾಗುವುದು. ಜಪ್ತಿ ಮಾಡಿದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ ಎಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ನಾಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬಿಗಿ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಬೈಕ್, ಕಾರುಗಳನ್ನು ರಸ್ತೆಗಿಳಿಸಿದರೆ ಪೊಲೀಸರು ಜಪ್ತಿ ಮಾಡಲಿದ್ದಾರೆ. ಜಪ್ತಿಯಾದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ. ಸರ್ಕಾರದ ಲಾಕ್ಡೌನ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಅದಕ್ಕೆ ತಕ್ಕಂತೆ ಎಲ್ಲರೂ ಹೊಂದಿಕೊಳ್ಳುವಂತೆ ಸಚಿವ ಕೆ.ಎಸ್ ಈಶ್ವರಪ್ಪ ಮನವಿ ಮಾಡಿದ್ದಾರೆ.
ಕರ್ನಾಟದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿರುವ ಕಾರಣ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಮೊರೆ ಹೋಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಮೇ 10ರಿಂದ ಮೇ 24ರ ತನಕ ಲಾಕ್ಡೌನ್ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯದಲ್ಲಿ ಸಾವು-ನೋವುಗಳನ್ನು ತಡೆಗಟ್ಟಬೇಕೆಂದರೆ ಲಾಕ್ಡೌನ್ ಮಾಡಲೇಬೇಕೆಂದು ತಜ್ಞರು ಕೂಡಾ ಮೇಲಿಂದ ಮೇಲೆ ಎಚ್ಚರಿಕೆ ನೀಡಿದ್ದಾರೆ.








