ಇನ್ನೂ ಒಂದು ವಾರ ಬಂದ್ ಆಗಿರಲಿದೆ ರಾಷ್ಟ್ರ ರಾಜಧಾನಿ ದೆಹಲಿ..!
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಕರ್ನಾಟಕ , ದೆಹಲಿ , ಮಹಾರಾಷ್ಟ್ರ , ಆಂಧ್ರ , ತೆಲಂಗಾಣ ಸೇರಿದಂತೆ ಸುಮಾರು 13 ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ.. ದೆಹಲಿಯಲ್ಲಿ ಕೊರೊಪನಾರ್ಭಟ ಹೆಚ್ಚಾಗಿದ್ದು, ಕಳೆದ 2 ವಾರಗಳಿಂದಲೂ ದೆಹಲಿ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಇದೀಗ ಈ ಅವಧಿಯನ್ನ ಇನ್ನೂ 1 ವಾರದ ಮಟ್ಟಿಗೆ ಅಂದ್ರೆ ಮೇ.17ರ ವರೆಗೆ ಲ್ಲಿನ ಸರ್ಕಾರ ವಿಸ್ತರಣೆ ಮಾಡಿದೆ.
ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 2-3 ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿ ದರ 35% ನಿಂದ 23% ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಒಂದು ವಾರಗಳ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಈ ಅವಧಿಯಲ್ಲಿ ಮೆಟ್ರೋ ರೈಲಿನ ಸೇವೆಯೂ ಬಂದ್ ಇರುವುದಾಗಿ ಘೋಷಿಸಿದ್ದಾರೆ.








