covid19 ಕೊರೊನಾ ಅಪ್ ಡೇಟ್ : ಕಳೆದ 24 ಗಂಟೇಲಿ 3,53,818 ಮಂದಿ ಗುಣಮುಖ
ನವದೆಹಲಿ : ಭಾರತದಲ್ಲಿ ಕೊರೊನಾ ಹುಚ್ಚುಕುದುರೆಯ ಓಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ.
ಪ್ರತಿದಿನ ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,66,161 ಕೋವಿಡ್ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 3,754 ಕೊರೊನಾ ಸೋಂಕಿತರು ಮೃತಪಟ್ಟಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,46,116 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 3,53,818 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 1,86,71,222 ಜನರು ರೋಗದಿಂದ ಚೇತರಿಸಿಕೊಂಡಂತಾಗಿದೆ. ಸದ್ಯ ದೇಶದಲ್ಲಿ 37,45,116 ಸಕ್ರಿಯ ಪ್ರಕರಣಗಳಿವೆ.










