ಚಾಮರಾಜನಗರದಲ್ಲಿ ಕೋವಿಡ್ ಲಸಿಕೆಗಾಗಿ ಪರದಾಟ
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊರತೆ ಇದ್ದು ಸಾರ್ವಜನಿಕರು ಲಸಿಕೆಗಾಗಿ ಪರದಾಡುವಂತಾಗಿದೆ.
ರಾಜ್ಯಾದ್ಯಂತ ಕೊರೊನಾ ಲಸಿಕೆಯನ್ನು ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಗೆ ಸರಬರಾಜು ಮಾಡುತ್ತಿದೆ.
ಆದರೆ ನಗರಕ್ಕೆ ಅಲ್ಪ ಪ್ರಮಾಣದ ಲಸಿಕೆ ಸರಬರಾಜಾಗುತ್ತಿದೆ.
ಸರ್ಕಾರ 18 ವರ್ಷಗಳ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಹಾಕಿಕೊಳ್ಳಲು ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ ಲಸಿಕೆಗಾಗಿ ಜನರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ.
ಆದರೆ ಲಸಿಕೆ ಮಾತ್ರ ಸಿಗುತ್ತಿಲ್ಲ ಅನ್ನೋದು ಸಾರ್ವಜನಿಕರ ದೂರಾಗಿದೆ.










