ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿಗೆ ಕೊರೊನಾ ಪಾಸಿಟಿವ್
ಬಾಲಿವುಡ್ ನ ಸುಲ್ತಾನ ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಗೆ ಕೊರೊನಾ ಪಾಸಿಟಿವ್ ಇರುವುದು ಖಚಿತವಾಗಿದೆ. ಈ ಕುರಿತು ಖುದ್ದು ಸಲ್ಮಾನ್ ಖಾನ್ ಅವರೇ ಮಾಧ್ಯಮದವರ ಎದುರು ಖಚಿತಪಡಿಸಿದ್ಧಾರೆ. ಅರ್ಪಿತಾಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಕೆಗೆ ರೋಗಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಈಗ ಆಕೆ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಸಲ್ಮಾನ್ ಖಾನ್ ಮಾಹಿತಿ ನೀಡಿದ್ದಾರೆ.
ಅಲ್ಲದೇ ಅರ್ಪಿತಾ ಖಾನ್ ಸಹ ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನಗೆ ಕೊರೊನಾ ಸೋಂಕು ತಗುಲಿತ್ತು. ದೇವರ ಆಶೀರ್ವಾದದಿಂದ ಗುಣಮುಖ ಆಗಿದ್ದೇನೆ ಎಂದಿದ್ದಾರೆ. ‘ಏಪ್ರಿಲ್ 2021ರ ಆರಂಭದಲ್ಲಿ ನಾನು ಕೋವಿಡ್ -19 ಪರೀಕ್ಷೆಗೆ ಒಳಪಟ್ಟಿದ್ದೆ. ಆ ಸಂದರ್ಭದಲ್ಲಿ ನನಗೆ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಎಲ್ಲಾ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೇನೆ. ದೇವರ ಅನುಗ್ರಹದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ, ಈಗ ಆರೋಗ್ಯವಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.







