ಕೋವಿಡ್ 2ನೇ ಅಲೆ ಗರಿಷ್ಠ ಮಟ್ಟಕ್ಕೆ ತಲುಪಿದ್ರೆ, ಭಾರತದ ಜಿಡಿಪಿ ಕುಸಿಯಲಿದೆ..!
ದೇಶದಲ್ಲಿ ಕೋವಿಡ್ 2ನೇ ಅಲೆ ತಾಂಡವವಾಡ್ತಿದೆ.. ಈ ನಡುವೆ ದೇಶವು ಆರ್ಥಿಕವಾಗಿಯೂ ಕುಂಠಿತ ಕಾಣ್ತಿದೆ.. ಇದೀಗ ಮತ್ತೊಂದು ಶಾಂಕಿಂಗ್ ವಿಚಾರ ಬಹಿರಂಗವಾಗಿದ್ದು, ಒಂದು ವೇಳೆ ಕೋವಿಡ್ 2ನೇ ಅಲೆಯು ಜೂನ್ ಅಂತ್ಯದ ವೇಳೆಗೆ ಗರಿಷ್ಠ ಮಟ್ಟವನ್ನು ತಲುಪಿದರೆ ಭಾರತದ ಜಿಡಿಪಿ ಬೆಳವಣಿಗೆ ದರ ಏಕ ಅಂಕೆಗಿಳಿಯಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಹೇಳಿದೆ.
ಜೂನ್ ಅಂತ್ಯದಲ್ಲಿ ಕೋವಿಡ್ ಸಂಖ್ಯೆ ಮತ್ತಷ್ಟು ಹೆಚ್ಚಿದರೆ 2021-22ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2 ಪ್ರತಿಶತದಷ್ಟು ಇಳಿಯಬಹುದು ಎನ್ನಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಆರಂಭದಲ್ಲಿ 2021-22ರಲ್ಲಿ ಭಾರತದ ಜಿಡಿಪಿ ಶೇಕಡಾ 11 ರಷ್ಟು ಏರಿಕೆಯಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಅಂದಾಜಿಸಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗವು ಮೇ-ಅಂತ್ಯದ ವೇಳೆಗೆ ಗರಿಷ್ಠ ಸಂಖ್ಯೆಯ ಪ್ರಕರಣಗಳನ್ನು ತಲುಪಿದರೆ, ಜಿಡಿಪಿ ಬೆಳವಣಿಗೆಯು ಶೇಕಡಾ 9.8 ಕ್ಕೆ ಇಳಿಯುತ್ತದೆ ಎಂದು ಹೇಳಿದೆ.
ಭಾರತಕ್ಕೆ ಹಸ್ತಾಂತರ ಪ್ರಶ್ನಿಸಿ ಲಂಡನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ದೇಶಭ್ರಷ್ಟ ನೀರವ್ ಮೋದಿ
ಭಾರತದಲ್ಲಿಂದು ಕೊರೊನಾ ಅಬ್ಬರ ತುಸು ಕಗ್ಗಿದಂತೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದೊಂದು ವಾರಕ್ಕೆ ಹೋಲಿಸಿದರೆ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು,
3,876 ಮಂದಿ ಮಾರಕ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,29,92,517 ಹಾಗೂ ಮೃತರ ಸಂಖ್ಯೆ 2,49,992ಕ್ಕೆ ಹೆಚ್ಚಳವಾಗಿದೆ.
ಇನ್ನು ನಿನ್ನೆ ಒಂದೇ ದಿನ 3,56,082 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 1,90,27,304 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಭಾರತದಲ್ಲೀಗ 37,15,221 ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.