ಕರ್ನಾಟಕದಲ್ಲಿಂದು 39,510 ಮಂದಿಗೆ ಕೋವಿಡ್ ಸೋಂಕು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಇಂದು 39,510 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 20,13,193ಕ್ಕೆ ಏರಿಕೆ ಆಗಿದೆ.
ಇವತ್ತು ಕೋವಿಡ್ ಗೆ 480 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 19,852 ಕ್ಕೆ ಏರಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು ರ್ಯಾಪಿಡ್ ಆಂಟಿಜನ್ ಟೆಸ್ಟ್ ಮೂಲಕ 11,579 ಮಂದಿಗೆ ಹಾಗೂ 1,04,659 ಜನರಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 39,510 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇವತ್ತು 22,584 ಮಂದಿ ಗುಣಮುಖರಾಗಿದ್ದು, ಈವರೆಗೆ 14,05,869 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,87,452ಕ್ಕೆ ಏರಿವೆ.









