‘4 ದಿನ ಯಜ್ಞ ನಡೆಸಿದ್ರೆ ಕೋವಿಡ್ 3ನೇ ಅಲೆ ಭಾರತವನ್ನು ಟಚ್ ಮಾಡಲ್ವಂತೆ’..!
ಮಧ್ಯಪ್ರದೇಶ : ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಮಧ್ಯಪ್ರದೇಶ ಸಚಿವೆ ಉಷಾ ಠಾಕೂರ್ ಇದೀಗ ಕೋವಿಡ್ 3ನೇ ಅಲೆ ಕುರಿತಾಗಿ ನೀಡಿರುವ ಹೇಳಿಕೆ ಭಾರೀ ವೈರಲ್ ಆಗಿದೆ.. 4 ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೋವಿಡ್ 19 ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ 2ನೇ ಅಲೆ ಹಲವು ಸಮಸ್ಯೆ ಸೃಷ್ಟಿಸುತ್ತಿದೆ. ಎರಡನೇ ಅಲೆಯಿಂದ ಭಾರತ ನರಳುತ್ತಿದೆ, ಆರೋಗ್ಯ ಮೂಲ ಸೌಕರ್ಯ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಫ್ರಂಟ್ ಲೌನ್ ಆರೋಗ್ಯ ಕಾರ್ಯಕರ್ತರ ಮೇಲೆ ಅಧಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ.
ಇಂದೋರ್‌ನಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಶುದ್ಧೀಕರಣಕ್ಕಾಗಿ, 4 ದಿನಗಳ ಕಾಲ ಯಜ್ಞವನ್ನು ಮಾಡಿ. ಇದನ್ನು ಯಜ್ಞ ಚಿಕಿತ್ಸೆ ಎನ್ನತ್ತಾರೆ, ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದನ್ನು ಮಾಡುವುದರಿಂದ ಕೋವಿಡ್ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ತಾಂಡವವಾಡ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ.. ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನೇ ದಿನೇ ಸೋಂಕಿತರು ಸಾವಿನ ಸಂಖ್ಯೆಗಳು ಹೆಚ್ಚಾಗ್ತಲೇ ಇದ್ದು, 2ನೇ ಅಲೆ ಭೀಕರತೆಯನ್ನ ತಡೆದುಕೊಳ್ಳುವ ಶಕ್ತಿ ಇಲ್ಲದಂತಾಗಿದೆ.. ಈ ನಡುವೆ 3ನೇ ಅಲೆಯ ಗಂಡಾಂತರವೂ ಭಾರತಕ್ಕೆ ಕಾದಿದ್ದು, 3ನೇ ಅಲೆಯ ಟಾರ್ಗೆಟ್ ಮಕ್ಕಳೇ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.








