ರಾಜ್ಯದಲ್ಲಿ ವಾಕ್ಸಿನ್ ಕೊರತೆ : “ಇಂದೆಂಥ ವ್ಯಾಕ್ಸಿನ್ ಅಭಿಯಾನ” ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ಬೆಂಗಳೂರು : ಬೆಡ್, ಆಕ್ಸಿಜನ್ ಕೊರತೆ ಮಧ್ಯೆ ಇದೀಗ ವ್ಯಾಕ್ಸಿನ್ ಕೊರತೆ ಕೂಡ ಉಂಟಾಗಿದೆ. ಜನರು ವಾಕ್ಸಿನ್ ಗಾಗಿ ಲಸಿಕಾ ಕೇಂದ್ರಗಳಲ್ಲಿ ಪರದಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ನಡೆಗೆ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.
ಅಲ್ಲದೆ ವ್ಯಾಕ್ಸಿನ್ ನೀಡಲು ನಿಮ್ಮಿಂದ ಸಾಧ್ಯವೇ ಇಲ್ಲ ಎಂದಾದರೆ ಹೇಳಿ ನಾವು ಸರ್ಕಾರದಿಂದ ವ್ಯಾಕ್ಸಿನ್ ಒದಗಿಸಲಾಗದು ಎಂದೇ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದೆ.
ಪ್ರತಿದಿನ ರಾಜ್ಯದಲ್ಲಿ ಕೊರೊನಾ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಲಸಿಕೆಗಾಗಿ ಜನರು ಪರದಾಡುವಂತೆ ಮಾಡುವಂತಾಗಿದೆ.
ರಾಜ್ಯದಲ್ಲಿ 6 ಕೋಟಿಗೂ ಹೆಚ್ಚು ಜನರಿದ್ದಾರೆ. ಈವರೆಗೆ ಒಂದು ಪಸರ್ಂಟ್ ನಷ್ಟು ಜನರಿಗೂ ಲಸಿಕೆಯನ್ನು ನೀಡಿಲ್ಲ. ಇಂದೆಂಥ ವ್ಯಾಕ್ಸಿನ್ ಅಭಿಯಾನ ಎಂದು ಹೈ ಕೋರ್ಟ್ ಚಾಟಿ ಬೀಸಿದೆ.
ಮೊದಲ ಡೋಸ್ ಲಸಿಕೆ ತೆಗೆದುಕೊಂಡವರಿಗೆ 2ನೇ ಡೋಸ್ ಸಿಕ್ಕಿಲ್ಲ. 2ನೇ ಡೋಸ್ ಪಡೆಯುವುದು ಜನರ ಹಕ್ಕಲ್ಲವೇ ಎಂದು ಪ್ರಶ್ನಿಸಿರುವ ಹೈ ಕೋರ್ಟ್, 26 ಲಕ್ಷ ಜನರಿಗೆ ವ್ಯಾಕ್ಸಿನ್ ಕೊರತೆಯಿದೆ.
ಈ ಗ್ಯಾಪ್ ನ್ನು ಹೇಗೆ ಸರಿಪಡಿಸುತ್ತೀರಿ ಎಂದು ಕೇಳಿದೆ. ಅಲ್ಲದೆ ಇದೇ ರೀತಿ ಮುಂದುವರೆದರೆ 2 ದಿನಗಳಲ್ಲಿ ವ್ಯಾಕ್ಸಿನೇಷನ್ ನೀಡುವಂತೆ ಆದೇಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಗೆ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.










