ಕೊರೊನಾ – ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ನಿಧನ
ಮೈಸೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.
ಈ ನಡುವೆ ಸಿನಿಮಾ ತಾರೆಯರು, ರಾಜಕೀಯ ಮುಖಂಡರು , ಅನೇಕ ಗಣ್ಯರು ಸಹ ಕೊರೊನಾ ಮಹಾಮಾರಿಯಿಂದ ಜೀವ ಕಳೆದುಕೊಳ್ತಿದ್ಧಾರೆ. ಇದೀಗ ಚುಂಚನಕಟ್ಟೆಯಲ್ಲಿರುವ ಆದಿಚುಂಚನಗಿರಿ ಶಾಖಾಮಠದ ಶಿವಾನಂದ ಸ್ವಾಮೀಜಿಗಳು ಕೊರೊನಾದಿಂದ ನಿಧನರಾಗಿದ್ಧಾರೆ. (63) ಶಿವಾನಂದ ಸ್ವಾಮೀಜಿಗಳಿಗೆ ಇತ್ತೀಚೆಗೆ ಕೋವಿಡ್ ಪಾಸಿಟಿವ್ ಖಚಿತವಾದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








