ಕೊರೊನಾ ಲಸಿಕೆಗೆ ರಾಜ್ಯ ಕಾಂಗ್ರೆಸ್ ನಿಂದ 100 ಕೋಟಿ : ಹುಲಿಯಾ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕಾ ಕೊರತೆ ಎದುರಾಗಿದ್ದು, ವ್ಯಾಕ್ಸಿನ್ ಖರೀದಿಗಾಗಿ ರಾಜ್ಯ ಕಾಂಗ್ರೆಸ್ ನಿಂದ ಸರ್ಕಾರಕ್ಕೆ ನೂರು ಕೋಟಿ ನೀಡಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೊರೊನಾ ಲಸಿಕೆ ಖರೀದಿಸಲು ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ.ನಂತೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.
ಕ್ಷೇತ್ರದ ಅಭಿವೃದ್ಧಿ ನಿಧಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ.

ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ರಾಜ್ಯ ಸರಕಾರಕ್ಕೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರತಿಯೊಬ್ಬರಿಗೆ ಕೊರೊನಾ ಲಸಿಕೆ ದೊರೆಯುವಂತಾಗಬೇಕು ಎಂಬುದು ನಮ್ಮ ಬಯಕೆ. ಆದ್ದರಿಂದ ಕಾಂಗ್ರೆಸ್ ನಲ್ಲಿ 99 ಶಾಸಕರು ಇದ್ದಾರೆ.
ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಮೊತ್ತವನ್ನೂ ಸೇರಿಸಿ 100 ಕೋಟಿ ರೂ. ನೀಡಲಾಗುವುದು. 100 ಕೋಟಿ ರೂ. ಮೊತ್ತವನ್ನು ಹೇಗೆ ಯಾರಿಗೆ ನೀಡಬೇಕು.
ಲಸಿಕೆ ಖರೀದಿಗೆ ಹೇಗೆ ಬಳಸಬೇಕು ಎಂಬುದನ್ನು ನಾವು ಚಿಂತನೆ ನಡೆಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ವಿವರಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.









