ಗೋವಾ – ಆಕ್ಸಿಜನ್ ಕೊರತೆಯಿಂದ ಕೋವಿಡ್ ಆಸ್ಪತ್ರೆಯ 74 ಮಂದಿ ಸಾವು
ಗೋವಾ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಇದೇ ರೀತಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 4 ದಿನಗಳ ಅಂತರದಲ್ಲಿ ಗೋವಾದ ಕೋವಿಡ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ 74 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.
ಮಂಗಳವಾರ 2ರಿಂದ 6ಗಂಟೆಯ ನಡುವೆ 26 ಮಂದಿ ಮೃತಪಟ್ಟಿದ್ದಾರೆ. ಬುಧವಾರ 20 ಮಂದಿ ಸಾವನಪ್ಪಿದ್ದಾರೆ. ಗುರುವಾರ ಬೆಳಗ್ಗೆ 15 ಮಂದಿ ಸಾವನ್ನಪ್ಪಿದ್ದರು. ಶುಕ್ರವಾರ(ಮೇ 14) 13 ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ಆಸ್ಪತ್ರೆಗೆ ಭೇಟಿ ನೀಡಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮೆಡಿಕಲ್ ಆಕ್ಸಿಜನ್ ಲಭ್ಯತೆಯ ಕೊರತೆಯಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಆಕ್ಸಿಜನ್ ಸರಬರಾಜು ಕೊರತೆ ಇಲ್ಲ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








