ಅಸ್ಸಾಂ – ಒಂದೇ ಜಾಗದಲ್ಲಿ 18 ಆನೆಗಳ ಸಾವು
ಅಸ್ಸಾಂ : ಜಾಗದಲ್ಲಿ 18 ಆನೆಗಳು ಸಾವನ್ನಪ್ಪಿರುವ ದುರ್ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ನಡೆದಿದೆ.. ಸಿಡಿಲು ಬಡಿದು ಆನೆಗಳು ಸಾವನ್ನಪ್ಪಿರೋದಾಗಿ ಅರಣ್ಯಾಧಿಕಾರಿಗಳು ಅನುಮಾನ ಹೊರಹಾಕಿದ್ದಾರೆ.ಈ ಸಂಬಂಧ ವನ್ಯಜೀವಿ ವಿಭಾಗದಮುಖ್ಯ ಸಂರಕ್ಷಣಾಧಿಕಾರಿ ಅಮಿತ್ ಶಾಯ್ ಮಾಹಿತಿ ನೀಡಿದ್ದು, ಘಟನೆ ನಡೆದ ಪ್ರದೇಶ ದುರ್ಗಮವಾಗಿದೆ. ಗುರುವಾರ ಮಧ್ಯಾಹ್ನದ ತನಕ ನಮ್ಮ ತಂಡ ಅಲ್ಲಿಗೆ ತಲುಪಲು ಸಾಧ್ಯವಾಗಿರಲಿಲ್ಲ. ಬೆಟ್ಟ ಪ್ರದೇಶವೊಂದರ ಮೇಲೆ 14, ಕೆಳಗೆ 4 ಆನೆಗಳ ಶವಗಳು ಪತ್ತೆಯಾಗಿದೆ. ಆನೆಗಳು ಸಿಡಿಲು ಬಡಿದು ಮೃತಪಟ್ಟಿವೆ ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.