ಕೊರೊನಾ ರಿಪೋರ್ಟ್ : ಭಾರತದಲ್ಲಿಂದು 3,26,098 ಹೊಸ ಕೇಸ್, 3,53,299 ಮಂದಿ ಗುಣಮುಖ Corona Report
ನವದೆಹಲಿ : ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಕೊಂಚ ತಗ್ಗಿದಂತೆ ಕಾಣುತ್ತಿದೆ. ಜೊತೆಗೆ ಚೇತರಿಕೆ ಪ್ರಮಾಣವೂ ಕೂಡ ಹೆಚ್ಚಾಗುತ್ತಿರುವುದು ತುಸು ನೆಮ್ಮದಿಯನ್ನ ತಂದಿದೆ.
ಭಾರತದಲ್ಲಿಂದು 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,66,207ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,53,299 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,04,32,898ಕ್ಕೆ ತಲುಪಿದೆ. ದೇಶದಲ್ಲಿನ್ನೂ 36,73,802 ಸಕ್ರಿಯ ಪ್ರಕರಣಗಳಿವೆ.










