ಕೊಡಗಿನಲ್ಲಿ ಗಾಳಿ ಸಹಿತ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ
ಕೊಡಗು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಸಮೇತ ಮಳೆಯಾಗ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮಾಡಿದೆ. ನಿನ್ನೆ ರಾತ್ರಿಯಿಂದಲೇ ಜಿಲ್ಲೆಯಲ್ಲಿ ಗಾಳಿ ಸಮೇತ ಮಳೆ ಆರಂಭವಾಗಿದೆ. ನಿರಂತರ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಅಲ್ಲದೇ ಕೊಡಗು ಜಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಬೆಟ್ಟತಪ್ಪಲು ನದಿ ಪಾತ್ರದ ವಾಸಮಾಡುವ ಜನರನ್ನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿನೆ ನೀಡಿದೆ. ಯಾವುದೇ ಅನಾಹುತಗಳಾಗದಂತೆ ಜಿಲ್ಲಾಡಳಿತದ ಮುಜಾಗ್ರತ ಕ್ರಮಗಳನ್ನ ಕೈಗೊಂಡಿದೆ. ಇನ್ನೂ ಸತತ 3 ವರ್ಷಗಳು ಕೊಡಗಿನಲ್ಲಿ ಪ್ರವಾಹ ಉಂಟಾಗಿ ಜನರು ಸಂಕಷ್ಕ್ಕೆ ಸಿಲುಕಿ ಪರಬಾರದ ಪಾಡುಗಳನ್ನ ಪಟ್ಟಿದ್ದಾರೆ. ಈ ಬಾರಿಯೂ ಅಂತಹದ್ದೇ ಪರಿಸ್ಥಿತಿ ಎದುರಾಗಬಹುದೇನೋ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.