ತೌಖ್ತೇ ಚಂಡಮಾರುತದ ಎಫೆಕ್ಟ್ – ಉಡುಪಿಯಲ್ಲಿ ನಿರಂತರ ಮಳೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ , ಕರಾವಳಿ ಭಾಗದ ಜಿಲ್ಲೆಗಳು , ಮಲೆನಾಡಿನಲ್ಲಿ ಭಾರೀ ಮಳೆಯಾಗ್ತಿದೆ.. ತೌಖ್ತೇ ಚಂಡಮಾರುತದ ಪರಿಣಾಮದಿಂದಾಗಿ ಉಡುಪಿ ಜಿಲ್ಲೆಯಲ್ಲಿ ನಿರಂತರ ತುಂತುರು ಮಳೆಯಾಗ್ತಿದೆ.
ಗಾಳಿಯ ಸಹಿತ ಸಾಧಾರಣ ಮಳೆಯಾಗ್ತಿದ್ದು, ನಿರಂತರ ಮಳೆಯಿಂದಾಗಿ ಜನ ಹೈರಾಣಾಗಿದ್ಧಾರೆ. ಇಂದು ದಿನವಿಡೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಮತ್ತೊಂದೆಡೆ ಅನೇಕ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿರುವ ಜಿಲ್ಲಾಡಳಿತವು ಮೀನುಕಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದ್ದಾರೆ. ಪಶ್ಚಿಮ ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.