ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸರ್ಕಾರ ಸುಳ್ಳು ಹೇಳುತ್ತಿದೆ : ಸಿದ್ದರಾಮಯ್ಯ

Mahesh M Dhandu by Mahesh M Dhandu
May 16, 2021
in Newsbeat, Politics, ರಾಜಕೀಯ
SIddaramaiah
Share on FacebookShare on TwitterShare on WhatsappShare on Telegram

ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸರ್ಕಾರ ಸುಳ್ಳು ಹೇಳುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರ ಕೊರೊನಾ ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸುಳ್ಳು ಹೇಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಲ್ಲದೆ ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ಚಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಈ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘ ಪತ್ರ ಬರೆದಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆ. ತಜ್ಞರ ಪ್ರಕಾರ ವೈರಸ್ ನ ಅಲೆ ಕಡಿಮೆಯಾಗುವುದೆಂದರೆ ಟೆಸ್ಟ್ ನಡೆಸಿದಾಗ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆಯಾಗಬೇಕು.

ವಾಸ್ತವದಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವುದರ ಬದಲು ಹೆಚ್ಚಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಹಾಸನ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ. 50ಕ್ಕಿಂತ ಹೆಚ್ಚಿಗೆ ಇದೆ.

ಇನ್ನುಳಿದ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ ಶೇ. 35ರ ಆಸುಪಾಸಿನಲ್ಲೇ ಇದೆ. ಶೇ. 20ಕ್ಕಿಂತ ಕಡಿಮೆ ಇರುವ ಜಿಲ್ಲೆಗಳು ಒಂದೆರಡಷ್ಟೇ. ಹೀಗಿರುವಾಗ ಸೋಂಕು ಕಡಿಮೆಯಾಗುತ್ತಿದೆ ಎಂದರೆ ಸುಳ್ಳು ಹೇಳಲಾಗುತ್ತಿದೆ ಎಂದರ್ಥ.

ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸುಳ್ಳು ಹೇಳಲಾಗ್ತಿದೆ. ಟೆಸ್ಟ್ ವಿಚಾರವನ್ನೇ ನೋಡಿದರೂ ಕೂಡ ಏಪ್ರಿಲ್ ತಿಂಗಳ ಕಡೆಯ ವಾರದಲ್ಲಿ ಪ್ರತಿದಿನ ಸರಾಸರಿ 1.75 ಲಕ್ಷ ಟೆಸ್ಟ್ ಮಾಡಲಾಗುತ್ತಿತ್ತು. ಈಗ ಶೇ. 30ರಷ್ಟು ಕಡಿಮೆಯಾಗಿ ದಿನಕ್ಕೆ ಸರಾಸರಿ 1.15 ಲಕ್ಷದಿಂದ 1.24 ಲಕ್ಷಕ್ಕೆ ಇಳಿಕೆಯಾಗಿದೆ.

Siddaramaiah

ಮೇ 6, 2021ರಂದು 2,64,441 ಜನರಿಗೆ ಟೆಸ್ಟ್ ಮಾಡಲಾಗಿದ್ದರೆ, ಮೇ 11, 2021ರಂದು ಕೇವಲ 1,16, 238 ಜನರಿಗೆ ಟೆಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡದೆ, ಅಲ್ಲೂ ಕಿ.ಮೀ.ಗಟ್ಟಲೆ ಕ್ಯೂ ನಿಲ್ಲಿಸುವುದು, ಪಡಿತರ ಪಡೆಯಲು ಅಂಗಡಿಗಳ ಮುಂದೆ ಕ್ಯೂ ನಿಲ್ಲಿಸುವುದೂ ನಡೆಯುತ್ತಿದೆ.

ಈ ರೀತಿಯ ಅವ್ಯವಸ್ಥೆಗಳಿಂದ ಕೊರೊನಾ ನಿಯಂತ್ರಿಸಲು ಸಾಧ್ಯವೇ? ಸರ್ಕಾರ ಈ ಎಲ್ಲ ತಪ್ಪುಗಳನ್ನು ಮುಚ್ಚಿಕೊಳ್ಳಲು ಟೆಸ್ಟ್ ಕಡಿಮೆ ಮಾಡಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಪತ್ರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, ‘ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ’ ಎಂದು ಬುರುಡೆ ಬಿಟ್ಟು ಜನರನ್ನು ಯಾಮಾರಿಸಿದ ಮೋದಿಯವರ ಸರ್ಕಾರ ಮತ್ತು ಅವರ ಪಟಾಲಮ್ಮಿಗೆ ಬಹುಶಃ ಈಗಲಾದರೂ ಅರ್ಥವಾಗಬೇಕು.

ಸರ್ಕಾರದ ಅಧೀನದಲ್ಲಿರುವ ಕಂಪನಿ, ಕಾರ್ಖಾನೆಗಳು ಮಾತ್ರ ಇಂತಹ ತುರ್ತು ಪರಿಸ್ಥಿತಿಯಲ್ಲಿ ದೇಶದ ರಕ್ಷಣೆಗೆ ನಿಲ್ಲುತ್ತವೆ ಎಂದು ಸಾರಾಸಗಟಾಗಿ ಸರ್ಕಾರದ ಅಧೀನದಲ್ಲಿದ್ದ ಕಾರ್ಖಾನೆ, ಕಂಪನಿ, ಸಂಸ್ಥೆಗಳನ್ನುಕಾರ್ಪೋರೇಟ್ ಧಣಿಗಳಿಗೆ ಮಾರಾಟ ಮಾಡಿ ಅದರ ಮೂಲಕ ಜನರ ಸಂಪತ್ತನ್ನೆಲ್ಲ ದೋಚುವ ಭೀಕರ ಭ್ಟಷ್ಟಾಚಾರಕ್ಕೆ ಅವಕಾಶ ಕೊಡುವ ಕೇಂದ್ರ ಸರ್ಕಾರಕ್ಕೆ ಕೇವಲ ಒಬ್ಬನೇ ಒಬ್ಬ ವ್ಯಾಕ್ಸಿನ್ ತಯಾರಕನನ್ನು ನಿಯಂತ್ರಿಸಲಾಗದ ದುಸ್ಥಿತಿ ಬಂದೊದಗಿದೆ.

ಸಾರ್ವಜನಿಕ ಕಂಪನಿಗಳನ್ನು ಯಾವ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಒತ್ತಾಯಿಸುವ ಠರಾವನ್ನು ಮಾಡಿ ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

corona cases

Tags: B.s YediyurappaCorona VirusSiddaramaiah
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram