ಕೊಪ್ಪಳದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ koppala
ಕೊಪ್ಪಳ : ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ಹುಚ್ಚು ಕುದುರೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಇಂದಿನಿಂದ ಐದು ದಿನಗಳ ಕಾಲ ಕೊಪ್ಪಳದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಬೆಳ್ಳಂ ಬೆಳಗ್ಗೆಯಿಂದಲೇ ಪೊಲೀಸರು ಅಲರ್ಟ್ ಆಗಿದ್ದಾರೆ.
ಸದ್ಯ ಕೊಪ್ಪಳ ಸಂಪೂರ್ಣ ಸ್ತಬ್ಧವಾಗಿದ್ದು, ಸುಖಾಸುಮ್ಮನೆ ಹೊರ ಬಂದವರ ಬೈಕ್, ಕಾರುಗಳನ್ನು ಪೊಲೀಸರು ಸೀಜ್ ಮಾಡ್ತಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳ ವಾಹನ ಸೀಜ್
ನಗರದಲ್ಲಿ ಬ್ಯಾಂಕ್ ಇಲ್ಲದಿದ್ದರೂ ಕೆಲ ಸಿಬ್ಬಂದಿ ಹೊರಗಡೆ ಬಂದಿದ್ದು, ಅವರ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇದರಿಂದ ಬ್ಯಾಂಕ್ ಸಿಬ್ಬಂದಿ ಬೆಳಗ್ಗೆಯೇ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದಿದ್ದರು.