ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್ 2ನೇ ಅಲೆ – ದೇಶದಲ್ಲಿ  ಸಾವನಪ್ಪಿದ ವೈದ್ಯರ  ಸಂಖ್ಯೆ ಎಷ್ಟು ಗೊತ್ತಾ..?

Namratha Rao by Namratha Rao
May 18, 2021
in National, Newsbeat, ದೇಶ - ವಿದೇಶ
How to overcome weakness after covid 19
Share on FacebookShare on TwitterShare on WhatsappShare on Telegram

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026

ಕೋವಿಡ್ 2ನೇ ಅಲೆ – ದೇಶದಲ್ಲಿ  ಸಾವನಪ್ಪಿದ ವೈದ್ಯರ  ಸಂಖ್ಯೆ ಎಷ್ಟು ಗೊತ್ತಾ..?

ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ ಹಗಲಿರುಳು ಜನರ ರಕ್ಷಣೆಗಾಗಿ ಪ್ರಾಣವನ್ನ ಪಣಕಿಟ್ಟು ಕಷ್ಟ ಪಡುತ್ತಿರುವ ವೈದ್ಯರನ್ನ ಹೆಮ್ಮಾರಿ ಕೊರೊನಾ ಬಲಿಪಡೆದಿದೆ. ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 270 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ಇಂದು ಬೆಳಗ್ಗೆಯಷ್ಟೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆಕೆ ಅಗರ್‌ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದರು. ಡಾ. ಅಗರ್‌ವಾಲ್ (62) ಈ ಮೊದಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಕಳೆದ ವಾರ ಏಮ್ಸ್‌ಗೆ ದಾಖಲಿಸಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು.

ಇದರ ಬೆನ್ನಲ್ಲೇ ಏಮ್ಸ್ ದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳನ್ನು ನೀಡಿದೆ.  ದೇಶದಲ್ಲಿ 2ನೇ ಅಲೆ ಸಂದರ್ಭದಲ್ಲಿ 270 ಮಂದಿ ವೈದ್ಯರು ಸಾವನ್ನಪ್ಪಿದ್ದು, ಈ ಪೈಕಿ ಬಿಹಾರದಲ್ಲಿ ಅತ್ಯಧಿಕ ಮಂದಿ (78) ವೈದ್ಯರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ 37 ಮಂದಿ, ದೆಹಲಿ 29 ಮಂದಿ ಮತ್ತು ಆಂಧ್ರ ಪ್ರದೇಶದಲ್ಲಿ 22 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

ಇನ್ನು ಮೊದಲ ಅಲೆ ವೇಳೆ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಆದರೆ 2ನೇ ಅಲೆ ಆರಂಭವಾಗಿ 2 ತಿಂಗಳಲ್ಲಿಯೇ 270 ಮಂದಿ ವೈದ್ಯರು ಜೀವಕಳೆದುಕೊಂಡಿದ್ದಾರೆ. ಕೊರೋನಾ ಸೋಂಕಿನ 2ನೇ ಅಲೆ ಅತ್ಯಂತ ಮಾರಣಾಂತಿಕವಾಗಿ ಪರಿಣಮಿಸಿದ್ದು, ಪ್ರಮುಖವಾಗಿ ಆರೋಗ್ಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ಮಂದಿ ಸಿಬ್ಬಂದಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಐಎಂ ಅಧ್ಯಕ್ಷ ಡಾ. ಜೆಎ ಜಯಲಾಲ್ ಹೇಳಿದ್ದಾರೆ.

ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತಿರುವ ವೈದ್ಯರಿಗೆ ಮೊದಲ ಹಂತದಲ್ಲಿ ಕೋವಿಡ್ ನಿಯಂತ್ರಣ ಲಸಿಕೆ ನೀಡಲಾಗಿತ್ತು. ಶೇ.90ರಷ್ಟು ಮಂದಿಗೆ ಮೊದಲ ಡೊಸ್ ನೀಡಲಾಗಿದ್ದು, ಶೇ.66ರಷ್ಟು ಮಂದಿಗೆ ಮಾತ್ರ ಎರಡನೆ ಡೊಸ್ ನೀಡಲಾಗಿದೆ. ದಿನ ನಿತ್ಯ ಸಾವಿಗೆ ಮುಖಾಮುಖಿಯಾಗಿ ನಿಂತು ಹೋರಾಡುವ ವೈದ್ಯಕೀಯ ಸಮುದಾಯದ ರಕ್ಷಣೆಗೆ ಆದ್ಯತೆ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ.

ಈ ಮಾರಕ ಕಾಯಿಲೆಯಿಂದಾಗಿ ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: AIMSCovid19doctors deathhospitals
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram