ವಿವಾದದ ಬಳಿಕ ಅಭಿಮಾನಿಗಳ ಬಳಿ ಕ್ಷಮೆ ಯಾಚಿಸಿದ ‘ರಿಯಲ್ ಸ್ಟಾರ್’
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಹಾವಳಿ ನಡುವೆ ಸಿನಿಮಾರ ಕ್ಷೇತ್ರದ ಕಲಾವಿದರು ಕಾರ್ಮಿಕರು , ಅನ್ನದಾತರು , ಬಡವರ ನೆರವಿಗೆ ಮುಂದಾಗಿರುವ ಉಪೇಂದ್ರ ಅವರು ಪುಣ್ಯ ಕೆಲಸಕ್ಕೆ ಸಾಧುಕೋಕಿಲ , ಶೋಭರಾಜ್ ಸೇರಿದಂತೆ ಅನೇಕರು ಸಾಥ್ ನೀಡಿದ್ದಾರೆ. ಉಪ್ಪಿ ಅವರ ಪುಣ್ಯ ಕೆಲಸಕ್ಕೆ ಎಲ್ಲೆಡೆಯಿಂದ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.. ಈ ನಡುವೆ ಉಪೇಂದ್ರ ಅವರು ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿ ಮಾಡಿದ್ದು, ಈ ಬಗ್ಗೆ ಉಪೇಂದ್ರ ಅವರು ಟ್ವೀಟ್ ಮೂಲಕ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.
ಯೂಟ್ಯೂಬ್ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಯದೆ ತಪ್ಪಾಗಿ ಹೇಳಿಕೆ ಕೊಟ್ಟಿದ್ದು, ಅದಕ್ಕೆ ಈಗ ಕ್ಷಮೆ ಯಾಚಿಸಿದ್ದಾರೆ. ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಹೇಳಿರುವ ಹೇಳಿಕೆ ಯಾರೋ ಇಂಗ್ಲಿಷ್‍ನವರು ಹೇಳಿರುವುದು ಎಂದು ತಿಳಿದು ಅದರ ಬಗ್ಗೆ ತಪ್ಪಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ಅರಿತ ಉಪೇಂದ್ರ ಈ ಹೇಳಿಕೆಯನ್ನು ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದು ಎಂದು ತಿಳಿಯದೆ ತಪ್ಪಾಗಿ ಹೇಳಿಕೆ ಕೊಟ್ಟೆ. ಕ್ಷಮೆ ಇರಲಿ ಎಂದು ಉಪೇಂದ್ರ ಟ್ವೀಟ್ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ಈ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








