ಕೊರೊನಾ ಸಂಕಷ್ಟ – 30 ಲಕ್ಷ ದೇಣಿಗೆ ನೀಡಿದ ನಟ ಚಿಯಾನ್ ವಿಕ್ರಮ್
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ಕೂಡ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ. ನಟ ವಿಕ್ರಮ್ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 30 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕೆ ನೆರವಾಗಿದ್ದಾರೆ ಎನ್ನಲಾಗಿದೆ. ತಮಿಳುನಾಡಿನ ನೂತನ ಸಿಎಂ ಎಂ.ಕೆ ಸ್ಟಾಲಿನ್ ಅವರಿಗೆ ಚೆಕ್ ವಿತರಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿಯಾನ್ ವಿಕ್ರಮ್ ಎಲ್ಲೂ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








