ದತ್ತು ಪಡೆದ ಊರುಗಳ ಜನರಿಗೆ ವ್ಯಾಕ್ಸಿನ್ ಕೊಡಿಸಿದ ಟಾಲಿವುಡ್ ‘ಪ್ರಿನ್ಸ್’
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಟಾಲಿವುಡ್ ನ ಪ್ರಿನ್ಸ್ ನಟ ಮಹೇಶ್ ಬಾಬು ತಾವು ದತ್ತು ಪಡೆದ ಊರಿನ ಜನಕ್ಕೆ ಲಸಿಕೆ ಕೊಡಿಸಿದ್ದಾರೆ. ಹೌದು.. ಮಹೇಶ್ ಬಾಬು ಬುರಿಪಾಲೆಂ ಮತ್ತು ಸಿದ್ದಾಪುರಂ ಹೆಸರಿನ ಎರಡು ಹಳ್ಳಿಗಳನ್ನು 2015ರಲ್ಲಿ ದತ್ತು ಪಡೆದಿದ್ದರು. ಆ ಹಳ್ಳಿಗಳಿಗೆ ಸಾಕಷ್ಟು ಸಹಾಯ ಮಾಡಿರುವ, ಮೂಲಸೌಕರ್ಯಗಳನ್ನು ದೊರಕಿಸಿಕೊಟ್ಟಿರುವ ಮಹೇಶ್ ಬಾಬು, ಇದೀಗ ಎರಡೂ ಗ್ರಾಮಗಳ ಜನರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡಿಸಿದ್ದಾರೆ. ಸರ್ಕಾರದ ಅಧಿಕಾರಿಗಳ ಜೊತೆ ಮಾತನಾಡಿ ಎರಡೂ ಗ್ರಾಮದ ಜನರಿಗೆ ಏಕಕಾಲದಲ್ಲಿ ವ್ಯಾಕ್ಸಿನ್ ವ್ಯವಸ್ಥೆ ಮಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








