‘ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೋವಿಡ್ ವೈರಸ್ ಗಳ ವಿರುದ್ಧ ಫೈಝರ್ , ಮೋಡರ್ನಾ ಲಸಿಕೆಗಳು ಹೆಚ್ಚು ಪರಿಣಾಮಕಾರಿ’
ಅಮೆರಿಕಾ : ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ 2 ಮಾದರಿಯ ರೂಪಾಂತರಿ ಕೊರೊನಾ ವೈರಸ್ ಪ್ರಭೇದಗಳ ವಿರುದ್ಧ ಫೈಝರ್ ಮತ್ತು ಮೋಡರ್ನಾ ಲಸಿಕೆಗಳು ಅತ್ಯಂತ ಪರಿಣಾಮಕಾರಿಯಾಗಿರುತ್ತವೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕದ ವಿಜ್ಞಾನಿಗಳು ನಡೆಸಿರುವ ಹೊಸ ಸಂಶೋಧನೆಯಿಂದ ಬಹಿರಂಗವಾಗಿದೆ.
ಈ ಸಂಶೋಧನೆಯನ್ನು NYU ಗ್ರಾಸ್ಮನ್ ಸ್ಕೂಲ್ ಆಫ್ ಮೆಡಿಸಿನ್ ಮತ್ತು NYU ಲ್ಯಾಂಗೋನ್ ಸೆಂಟರ್ ನಡೆಸಿವೆ. ಆದರೆ ಈ ಸಂಶೋಧನೆಯು ಪ್ರಾಥಮಿಕವಾಗಿದ್ದು, ಯಾವುದೇ ಪತ್ರಿಕೆಯಲ್ಲಿ ಪ್ರಕಟಗೊಂಡಿಲ್ಲ.
ಈ ವೈರಸ್ ಪ್ರಭೇದಗಳ ವಿರುದ್ಧ ಈ ಲಸಿಕೆಗಳು ಉತ್ಪಾದಿಸುವ ಪ್ರತಿಕಾಯಗಳು ಕೊಂಚ ದುರ್ಬಲವೆನ್ನುವುದನ್ನು ನಾವು ಕಂಡುಕೊಂಡಿದ್ದೇವೆ. ಆದರೆ, ಲಸಿಕೆಗಳ ರಕ್ಷಣಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವಷ್ಟು ದುರ್ಬಲ ಅಲ್ಲ ಎಂದು ವರದಿಯಿಂದ ತಿಳಿದುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








