ಇಸ್ರೇಲ್ – ಪಾಲೆಸ್ಟೈನ್ ನಡುವೆ ಘರ್ಷಣೆ : 316 ಕಟ್ಟಡಗಳಿಗೆ ಹಾನಿ , 52 ಸಾವಿರಕ್ಕೂ ಅಧಿಕ ಪ್ಯಾಲಿಸ್ಟೇನಿಯರ ಸ್ಥಳಾಂತರ
ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರು ನಡೆಸುತ್ತಿರುವ ವೈಮಾನಿಕ ದಾಳಿಗೆ ಇಸ್ರೇಲ್ ಸೇನೆಯೂ ಪ್ರತ್ಯುತ್ತರ ನೀಡ್ತಿದೆ. ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ, ಇಸ್ರೇಲ್ ನಡೆಸಿದ ಏರ್ ಸ್ಟ್ರೈಕ್ ನಿಂದಾಗಿ 6 ಆಸ್ಪತ್ರೆಗಳು ಮತ್ತು 9 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ 132 ಕಟ್ಟಡಗಳು ನಾಶವಾಗಿವೆ ಮತ್ತು 316 ಕಟ್ಟಡಗಳು ತೀವ್ರವಾಗಿ ಹಾನಿಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಗಾಜಾ ಪಟ್ಟಿಯಿಂದ 52 ಸಾವಿರಕ್ಕೂ ಅಧಿಕ ಪ್ಯಾಲಿಸ್ಟೇನಿಯರನ್ನು ಸ್ಥಳಾಂತರಿಸಲಾಗಿದೆ. ಸುಮಾರು 47,000 ಜನರು ಗಾಜಾದ ಯುಎನ್ ನಡೆಸುತ್ತಿರುವ 58 ಶಾಲೆಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವಿಶ್ವಸಂಸ್ಥೆಯ ಕಚೇರಿಯ ವಕ್ತಾರ ಜೆನ್ಸ್ ಲಾರ್ಕೆ ತಿಳಿಸಿದ್ದಾರೆ .
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








