500 ಕೋಟಿ ಮೌಲ್ಯದ ಪ್ಯಾಕೇಜ್ ಘೋಷಿಸಲಿದ್ದಾರೆ ರಾಜಾಹುಲಿ..?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದ ಹಿನ್ನಲೆಯಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇದರ ಜೊತೆಗೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗಾಗಿ ಸಿಎಂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಇದೇ ವಿಚಾರವಾಗಿ ಇಂದು ಸಿಎಂ ಬಿಎಸ್ ವೈ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಈ ವೇಳೆ ಸಿಎಂ ಲಾಕ್ ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಮೂಲಗಳ ಪ್ರಕಾರ 500 ಕೋಟಿ ಮೌಲ್ಯದ ಪ್ಯಾಕೇಜ್ ನ್ನು ಸಿಎಂ ಯಡಿಯೂರಪ್ಪ ಅನೌನ್ಸ್ ಮಾಡೋ ಸಾಧ್ಯತೆ ಇದೆ. ಈ ಹಿನ್ನೆಲೆ ನಿನ್ನೆ ಸಿಎಂ ಯಡಿಯೂರಪ್ಪ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ನಲ್ಲಿ ಕಟ್ಟಡ ಕಾರ್ಮಿಕರಿಗೆ ವಿನಾಯಿತಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಪ್ಯಾಕೇಜ್ ನಿಂದ ಕೈಬಿಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಜೊತೆಗೆ ಕರೆಂಟ್ ಬಿಲ್, ವಾಟರ್ ಬಿಲ್, ಇಎಂಐಗಳನ್ನು ಮುಂದೂಡುವ ಸಾಧ್ಯತೆಗಳಿವೆ.








