ಸಾವಿನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುರಿ ಪ್ರತಾಪ್ ..!
ಇತ್ತೀಚೆಗೆ ಕೋವಿಡ್ ಹಾವಳಿ ನಡುವೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಗಳನ್ನ ಸೃಷ್ಟಿ ಮಾಡುವ ಪ್ರಯತ್ನದಲ್ಲಿದ್ದಾರೆ. ಇತ್ತೀಚೆಗೆ ಸ್ಯಾಂಡಲ್ ವುಡ್ ನಟ ದೊಡ್ಡಣ್ಣ ಅವರು ಸಾವನಪ್ಪಿದ್ದಾರೆ ಎಂಬ ಸುಳ್ಳು ವದಂತಿಗಳನ್ನ ಹಬ್ಬಿಸಿದ್ದರು. ಆದ್ರೆ ಇದಕ್ಕೆ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿ ನಾನಿನ್ನೂ ಬದುಕಿದ್ದೇನೆ ಎಂದಿದ್ದರು.. ಅಲ್ಲದೇ ಶಕ್ತಿಮಾನ್ ಖ್ಯಾತಿಯ ಮುಖೇಶ್ ಖನ್ನಾ , ಬಾಲಿವುಡ್ ನ ಖ್ಯಾತ ನಟ ಪರೇಶ್ ಬಗ್ಗೆಯೂ ಇಂತಹದ್ದೇ ಸುದ್ದಿಗಳನ್ನ ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸಲಾಗಿತ್ತು.. ಈ ವದಂತಿಗಳಿಗೆ ನಟರು ಸ್ಪಷ್ಟನೆ ನೀಡಿದ್ದರು..
ಇದೀಗ ಕನ್ನಡದ ಖ್ಯಾತ ಹಾಸ್ಯ ನಟ ಮಾಜಿ ಬಿಗ್ ಬಾಸ್ ಸ್ಪರ್ಧಿ ಕುರಿ ಪ್ರತಾಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸ್ಥಿತಿ ಬಹಳ ಗಂಭೀರವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸಾಲದಕ್ಕೆ ಅವರು ನಿಧನರಾಗಿದ್ದಾರೆ ಎಂಬ ಪೋಸ್ಟ್ ಗಳು ಸಹ ವೈರಲ್ ಆಗಿ ಗೊಂದಲ ಸೃಷ್ಟಿಸಿದ್ದರವು.
ಈ ವದಂತಿಗಳಿಗೆ ಈಗ ಖುದ್ದು ಕುರಿ ಪ್ರತಾಪ್ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಕೇವಲ ವಂದತಿ ಅಷ್ಟೇ. ನಾನು ಆರೋಗ್ಯವಾಗಿಯೇ ಇದ್ದೇನೆ. ನನಗೇನು ಆಗಿಲ್ಲ ಎಂದು ವಿಡಿಯೋ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ತುಂಬಾ ಜನ ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ಹೇಳಿ ಹೇಳಿ ಸಾಕಾಯಿತು. ನಾನು ಆರಾಮಾಗಿದ್ದೇನೆ, ಮನೆಯಲ್ಲಿಯೇ ಇದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ. ಚೆನ್ನಾಗಿದ್ದವರ ಬಗ್ಗೆಯೂ ಇಂತಹ ಸುಳ್ಳು ಸುದ್ದಿಗಳನ್ನು ಏಕೆ ಹರಡಿಸುತ್ತಾರೋ ಗೊತ್ತಿಲ್ಲ. ಎಲ್ಲರೂ ಮನೆಯಲ್ಲಿರಿ, ಎಲ್ಲೂ ಹೊರಗೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








