ಮಹಾರಾಷ್ಟ್ರದಲ್ಲಿ ದುರ್ಬಲಗೊಂಡ ತೌಕ್ತೇ ಚಂಡಮಾರುತ – 11 ಮಂದಿ ಸಾವು
ಮುಂಬೈ: ಭಾರತದ ಪಶ್ಚಿಮ ಕರಾವಳಿ ಭಾಗಗಲ್ಲಿ ತೌತೇ ಚಂಡಮಾರುತದಿಂದ ತೀವ್ರ ಹಾನಿ ಉಂಟಾಗಿದೆ. ಕರ್ನಾಟಕದ ಕರಾವಳಿ ಪ್ರದೇಶಗಳು , ಮಲೆನಾಡು ಭಾಗಗಳು ಸೇರಿದಂತೆ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ತೌತೇ ಚಂಡಮಾರುತದಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ.. ಅನೇಕರು ಜೀವ ಕಳೆದುಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೂ 11 ಮಂದಿ ಚಂಡಮಾರುತದ ಹೊಡೆತಕ್ಕೆ ಬಲಿಯಾಗಿದ್ದಾರೆ. ಮುಂಬೈ, ಠಾಣೆ, ಫಾಲ್ಘರ್, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಲ್ಲಿ ಕಳೆದ 2 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಹಲವು ಭಾಗಗಳಲ್ಲಿ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಮನೆಗಳಿಗೆ ಹಾನಿಯಾಗಿದೆ.. ಹಲವು ಹಡಗುಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ವಿದ್ಯುತ್ ಸಂಪರ್ಕ ಕಡಿತಗೊಂಡು ಜನರು ಪರದಾಡುವಂತಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.