ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ Rain
ಕಾರವಾರ : ತೌಕ್ತೆ ಚಂಡಮಾರುತದ ಅಬ್ಬರ ಕಡಿಮೆಯಾದರೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ.
ನಿನ್ನೆ ತಡ ರಾತ್ರಿಯಿಂದ ಮಳೆ ಶುರುವಾಗಿದ್ದು, ಕಾರವಾರದ ವಿವಿಧ ರಸ್ತೆಗಳಲ್ಲಿ ನೀರು ತುಂಬಿಕೊಂಡು ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಗುಡುಗು ಸಹಿತ ಮಳೆಯಿಂದಾಗಿ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದೆ.
ಜಿಲ್ಲೆಯಲ್ಲಿ ಕೊರೊನಾ ಅಬ್ಬರದ ನಡುವೆ ಇದೀಗ ಮಳೆ ಹೆಚ್ಚಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.