ರಾಜ್ಯದಲ್ಲಿ ಮುಂದುವರೆದ ಕೊರೊನಾ ರಣಕೇಕೆ –
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಇವತ್ತು ಹೊಸದಾಗಿ 28,869 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಂದು ಒಂದೇ ದಿನ 548 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 23,854 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಂಖ್ಯೆ 23,35,524 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 52,257 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 17,76,695 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5,34,954 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರು ನಗರದಲ್ಲಿ ಇಂದು 9409 ಜನರಿಗೆ ಸೋಂಕು ತಗಲಿದ್ದು, 289 ಮಂದಿ ಮೃತಪಟ್ಟಿದ್ದಾರೆ. 3,06,625 ಸಕ್ರಿಯ ಪ್ರಕರಣಗಳು ಇವೆ. 25,776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇನ್ನೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 3,874 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಲ್ಲಿಯವರೆಗೆ 2,23,55,440 ಜನರು ಗುಣಮುಖರಾಗಿದ್ದಾರೆ. ನಿನ್ನೆ ಒಂದೇ ದಿನ 3,69,077 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಯಿಂದ ಒಟ್ಟು 2,87,122 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ದೇಶದಲ್ಲಿನ್ನೂ 31,29,878 ಸಕ್ರಿಯ ಪ್ರಕರಣಗಳಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.