ರಾಜ್ಯದಲ್ಲಿ ಮತ್ತಷ್ಟು ಟಫ್ ಆಗಲಿದೆ ಲಾಕ್ ಡೌನ್..!
ಬೆಂಗಳೂರು : ರಾಜ್ಯದಲ್ಲಿ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾ ವೈರಸ್ ಗೆ ಲಗಾಮು ಹಾಕಲು ರಾಜ್ಯ ಸರ್ಕಾರ ನಾನಾ ಸರ್ಕಸ್ ಮಾಡುತ್ತಿದೆ.
ಕೊರೊನಾ ಹೆಮ್ಮಾರಿಗೆ ಕಡಿವಾಣ ಹಾಕಲು ಮೊದಲು ಜನತಾ ಕಫ್ರ್ಯೂ ಜಾರಿ ಮಾಡಿದ್ದ ಸರ್ಕಾರ ಬಳಿಕ ಜನತಾ ಲಾಕ್ ಡೌನ್ ಘೋಷಣೆ ಮಾಡಿದೆ.
ಆದರೂ ರಾಜ್ಯದಲ್ಲಿ ಕೊರೊನಾ ಹತೋಟಿ ಸಿಗುತ್ತಿಲ್ಲ. ಪ್ರತಿದಿನ ರಾಜ್ಯದಲ್ಲಿ ಕೊರೊನಾ ಸ್ಫೋಟವೇ ಆಗುತ್ತಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಅದರಲ್ಲೂ ಇದೀಗ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಸರ್ಕಾರಕ್ಕೆ ತಲೆನೋವು ಉಂಟು ಮಾಡಿದೆ.
ಈ ಹಿನ್ನೆಲೆಯಲ್ಲಿ ಸದ್ಯದ ಲಾಕ್ ಡೌನ್ ಮುಗಿಯೋಕೆ ಮೂರು ದಿನ ಇರುವಾಗ ಮತ್ತೆ ಟಫ್ ರೂಲ್ಸ್ ಗೆ ಸರ್ಕಾರ ಮುಂದಾಗಿದೆ.
ಲಾಕ್ ಡೌನ್ ನಲ್ಲೂ ಕುಂಠು ನೆಪ ಹೇಳಿಕೊಂಡು ಅನಗತ್ಯವಾಗಿ ಓಡಾಡುತ್ತಿರುವವರಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಲು ಚಿಂತನೆ ನಡೆಸಿದೆ.
ಸದ್ಯ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದನ್ನ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
ಗೃಹಸಚಿವ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಲಾಕ್ ಡೌನ್ ಮತ್ತಷ್ಟು ಟಫ್ ಮಾಡಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕು. ಅನಗತ್ಯ ಓಡಾಟಕ್ಕೆ ಲಗಾಮು ಹಾಕಬೇಕು. ವಾಹನ ಜಪ್ತಿ ಮಾಡಿ ಕೇಸ್ ದಾಖಲಿಸಿಕೊಳ್ಳುವಂತೆ ಆದೇಶಿಸಿದ್ದಾರೆ.