ಕೋವಿಡ್ ಸಂಕಷ್ಟ – 500 ಉಚಿತ ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸಿದ ಸಲ್ಲು ಭಾಯ್..!
ಮುಂಬೈ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಅದ್ರಂತೆ ಬಾಲಿವುಡ್ ನ ಸುಲ್ತಾನ ಸಲ್ಮಾನ್ ಖಾನ್ ಸಹ ಕೋವಿಡ್ 2ನೇ ಅಲೆ ವೇಳೆ , ಬಡವರು , ಕೊರೊಬನಾ ಸೋಂಕಿತರಿಗೆ ಸಾಕಷ್ಟು ಸಹಾಯಗಳನ್ನ ಮಾಡುತ್ತಾ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕ ಬಾಬಾ ಸಿದ್ವಿಕ್ ಹಾಗೂ ಅವರ ಪುತ್ರ ಜೇಶಾನ್ ಸಿದ್ವಿಕ್ ಜೊತೆ ಸೇರಿ ಸಲ್ಮಾನ್ ಖಾನ್ ಅವರು ಕೋವಿಡ್-19 ರೋಗಿಗಳಿಗೆ 500 ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿದ್ದಾರೆ. ಅವುಗಳ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ಮೊದಲ 500 ಆಕ್ಸಿಜನ್ ಸಿಲಿಂಡರ್ಗಳು ಮುಂಬೈಗೆ ತಲುಪಿದೆ. ತುರ್ತು ಪರಿಸ್ಥಿತಿಯಲ್ಲಿ ಅಗತ್ಯವಿರುವ ಕೊರೊನಾ ಸೋಂಕಿತರು ಈ ಸಂಖ್ಯೆಗೆ ಕರೆ ಮಾಡಿ 8451869785. ನಾವು ಈ ಸಿಲಿಂಡರ್ಗಳನ್ನು ಉಚಿತವಾಗಿ ನೀಡುತ್ತೇವೆ, ಒಮ್ಮೆ ಬಳಸಿದ ನಂತರ ಅದನ್ನು ಹಿಂದಿರುಗಿಸಿ’ ಎಂದು ಬರೆದುಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.