‘ಕಿರಿಕ್ ರಾಣಿ’ ಸಂಯುಕ್ತಾ ಹೆಗ್ಡೆಗೆ ಕೊರೊನಾ ಸೋಂಕು ದೃಢ
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಖ್ಯಾತಿ ಪಡೆದ ಕನ್ನಡದ ನಟಿ ಸಂಯುಕ್ತಾ ಹೆಗ್ಡೆಗೆ ಇದೀಗ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಟ್ವೀಟ್ ನಲ್ಲಿ ಏನಿದೆ…?
‘ಎಲ್ಲರಿಗೂ ಹಾಯ್,,,ಎಲ್ಲರೂ ಆರಾಮಗಿದ್ದೀರಾ ಎಂದು ಭಾವಿಸುತ್ತೇನೆ. ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನೀವು ಸುರಕ್ಷಿತೆಯಿಂದಿರಿ. ನನ್ನ ಪೋಷಕರಿಗೆ ಕೋವಿಡ್ ತಗುಲಿತ್ತು. ಈಗ ಅವರು ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ ಎಂದಿದ್ದಾರೆ.
ಇನ್ನು ಇದೇ ವೇಳೆ BBMP ಸಿಬ್ಬಂದಿಯ ಕೆಲಸದ ಬಗ್ಗೆಯೂ ಮಾತನಾಡಿರುವ ಸಂಯುಕ್ತಾ, 25 ದಿನಗಳ ಹಿಂದೆ ನಮ್ಮ ಪೋಷಕರು ಕೊರೊನಾ ಪರೀಕ್ಷೆ ಮಾಡಿದಾಗ, ವರದಿ ಬಂದ 11 ದಿನದ ನಂತರ ಫೋನ್ ಮಾಡಿದ್ದರು. ಆದ್ರೀಗ, ನನ್ನ ವರದಿ ಬಂದ ಒಂದು ಗಂಟೆಯಷ್ಟರಲ್ಲಿ ಫೋನ್ ಮಾಡಿ ವಿಚಾರಿಸಿದರು ಎಂದು ಬರೆದುಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.