‘ಮತ್ತೆ ಕರುನಾಡು ಬಂದ್’… 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ – ಜೂನ್ 7 ರರೆಗೂ ಲಾಕ್ ಡೌನ್
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಾವಳಿ ಮಿತಿ ಮೀರಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ರಾಜ್ಯ ಸರ್ಕಾರ ಮೇ 25 ರವರೆಗೂ ಲಾಕ್ ಡೌನ್ ಜಾರಿಗೊಳಿಸಿದ್ದು, ಇದನ್ನ ಈಗ ಜೂನ್ 6 ರವೆಗೂ ವಿಸ್ತರಿಸಲಾಗಿದೆ… ಹೌದು ಕೋವಿಡ್ ತಡೆಗೆ ಲಾಕ್ ಡೌನ್ ಮುಂದುವರೆಸುವುದು ಅನಿವಾರ್ಯವೆಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ಸೇರಿದಂತೆ ಹಲವರು ಅಭಿಪ್ರಾಯ ಹೊರಹಾಕಿದ ಬೆನ್ನಲ್ಲೇ ಲಾಕ್ ಡೌನ್ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ.
ಅಂದ್ರೆ ಮೇ.24ರಿಂದ ಮತ್ತೆ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಿರಲಿದೆ.. ಜೂನ್ 7 ರ ಬೆಳಿಗ್ಗೆ 6 ಗಂಟೆಯ ವರೆಗೂ ಲಾಕ್ ಡೌನ್ ಆಗಿರಲಿದೆ. ಅಲಲ್ಲದೇ ಮತ್ತಷ್ಟು ಕಠಿಣ ಕ್ರಮಗಳನ್ನ ತರಲಾಗಿದೆ.. ಜನರು 10 ಗಂಟೆಯಾದ್ಮೇಲೂ ಸುಖಾಸುಮ್ಮನೆ ಓಡಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.. ಜೊತೆಗೆ 9.45 ರಷ್ಟರಲ್ಲೇ ಜನರು ಮನೆ ಸೇರಬೇಕು.. ಅಗತ್ಯವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂವರೆಗೂ ಅವಕಾಶ ನೀಡಲಾಡಿದೆ.
ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.