ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ ಎಂದ ಆರೋಗ್ಯ ಸಚಿವ ಸುಧಾಕರ್‌

admin by admin
May 21, 2021
in Newsbeat, State, ರಾಜ್ಯ
dr sudhakar davanagere saakshatv
Share on FacebookShare on TwitterShare on WhatsappShare on Telegram

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ ಎಂದ ಆರೋಗ್ಯ ಸಚಿವ ಸುಧಾಕರ್‌ – ದಾವಣಗೆರೆ ಜಿಲ್ಲೆ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆ

dr sudhakar saakshatvದಾವಣಗೆರೆ : ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಇದೊಂದು ಶಿಲೀಂದ್ರದಿಂದ ಉಂಟಾಗುವ ರೋಗ. ಇದಕ್ಕೆ ಅನೇಕ ಕಾರಣಗಳಿವೆ. ಅತಿಯಾದ ಸ್ಟಿರಾಯ್ಡ್‌ ಸೇವನೆ, ಹೆಚ್ಚಿನ ಆಕ್ಸಿಜನ್‌ ಬಳಕೆ, ಹೆಚ್ಚು ಅವಧಿಗೆ ಐಸಿಯುನಲ್ಲಿರುವುದು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಮಧುಮೇಹ, ಮೂತ್ರಪಿಂಡ, ಕ್ಯಾನ್ಸರ್‌ ಮುಂತಾದ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಆಗಿದ್ದಲ್ಲಿ ಅಂತವರಿಗೆ ಕೋವಿಡ್‌ ಬಂದು ಹೋದ ನಂತರ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದು ಕೋವಿಡ್‌ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ದಾವಣಗೆರೆಯಲ್ಲಿ ಮಾತನಾಡಿದರು.

ಈಗಾಗಲೇ ಈ ರೋಗದ ಪತ್ತೆ, ಚಿಕಿತ್ಸೆ ಮತ್ತು ಔಷಧೋಪಚಾರಗಳ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಇಂದು ಅವರು ವರದಿ ನೀಡುವ ನಿರೀಕ್ಷೆಯಿದೆ. ಆರಂಭಿಕ ಹಂತದಲ್ಲಿ ಇಎನ್‌ಟಿ ತಜ್ಞರು ಪರಿಶೀಲನೆ ನಡೆಸಬೇಕು. ಹೀಗಾಗಿ ಕೋವಿಡ್‌ ನಿಂದ ಗುಣಮುಖರಾದ ಎಲ್ಲರಲ್ಲಿ ಈ ಕಾಯಿಲೆ ಸಂಬಂಧ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೆ ಮನವಿ

ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದ ಔಷಧದ ಸರಬರಾಜು ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರ ಸಚಿವ ಸದಾನಂದಗೌಡರಿಗೆ ಮನವಿ ಮಾಡಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧ ಲಭ್ಯವಾಗಲಿದೆ. ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆಯನ್ನೂ ನೀಡಲಾಗಿದೆ. ಹೀಗಾಗಿ ಜನರು ಆತಂಕ ಪಡುವ ಭಯಭೀತರಾಗುವ ಅಗತ್ಯವಿಲ್ಲ ಎಂದರು.
ಇನ್ನೂ ಕೋವಿಡ್‌ ಎರಡನೇ ಅಲೆ ಕೆಲ ಜಿಲ್ಲೆಗಳಲ್ಲಿ ಹೊರತುಪಡಿಸಿ ಹೆಚ್ಚಿನ ಜಿಲ್ಲೆಗಳಲ್ಲಿ ಇಳಿಮುಖ ಸ್ಥಿತಿಯಲ್ಲಿದೆ. ಇದು ಸಮಾಧಾನಕರ ಅಂಶ. ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮ ಮತ್ತು ಜನತೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಇದೇ ರೀತಿ ಜನತೆ ಸಹಕಾರ ನೀಡಿದರೆ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ ಎಂದು ತಿಳಿಸಿದರು.

dr sudhakar saakshatvಕೆಲ ಲೋಪಗಳಿವೆ
ಕೋವಿಡ್‌ ನಿಯಂತ್ರಣ ವಿಷಯಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೆಲ ನ್ಯೂನ್ಯತೆಗಳಿವವೆ. ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಆರು ತಿಂಗಳ ಹಿಂದೆಯೇ ಕಳುಹಿಸಿಕೊಟ್ಟಿದ್ದ ವೆಂಟಿಲೇಟರ್‌ಗಳನ್ನು ಕೆಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿಲ್ಲ. ಹಾಗೆಯೇ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಆರೈಕೆ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲು ಮಾಡಿ ಔಷಧೋಪಚಾರ ನೀಡಲು ಸೂಚಿಸಲಾಗಿದೆ. ಮುಂದಿನ ವಾರದೊಳಗೆ ಈ ಎಲ್ಲಾ ಲೋಪಗಳನ್ನು ಸರಿಪಡಿಸಲು ಗಡುವು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಇರುವ ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತರಷ್ಟು ಹಾಸಿಗೆ ನೀಡಬೇಕು ಎಂಬ ವಿಷಯ ಸರಿಯಾಗಿ ಪಾಲನೆ ಆಗಿಲ್ಲ. ಒಂದೆರಡು ದಿನದಲ್ಲಿ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಜರುಗಿಸಬೇಕು. ಅಗತ್ಯವಾದರೆ ಕಾನೂನು ಮೂಲಕ ಶಿಸ್ತುಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೊರತೆ ಪ್ರಶ್ನೆಯಿಲ್ಲ
ಜಿಲ್ಲೆಯಲ್ಲಿ ಆಕ್ಸಿಜನ್‌ ಮತ್ತು ಔಷಧಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದ ಎಲ್ಲ ನೆರವನ್ನೂ ಒದಗಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಸೇರಿರುವ ಎಲ್ಲಾ ತಾಲ್ಲೂಕುಗಳಲ್ಲಿ ಕನಿಷ್ಟ ನೂರು ಹಾಸಿಗೆಗಳಿಗೆ ಆಕ್ಸಿಜನ್‌ ಸಂಪರ್ಕ ನೀಡುವ ಆಲೋಚನೆ ಇದೆ. ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ ಹಾಸಿಗೆಗಳಿಗೆ ಆಕ್ಸಿಜನ್‌ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ವ್ಯಾಕ್ಸಿನ್‌ ವಿಷಯದಲ್ಲೂ ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಶಿಕ್ಷಕರನ್ನೂ ಆ ಪಟ್ಟಿಗೆ ಸೇರಿಸಲಾಗಿದೆ. ಒಟ್ಟಾರೆ ಮೂರನೇ ಅಲೆ ಬರುವ ವೇಳೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ವೈದ್ಯರ ಬಹುತೇಕ ಎಲ್ಲಾ ಹುದ್ದೆಗಳನ್ನು ಒಂದು ವಾರದಲ್ಲಿ ತುಂಬಲಾಗುವುದು. ಹಾಗೆಯೇ ತಜ್ಞರ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಕೆಲ ದಿನಗಳಲ್ಲಿ ಆ ಪ್ರಕ್ರಿಯೆ ಕೂಡ ಮುಗಿಯಲಿದೆ. ಗುತ್ತಿಗೆ ಆಧಾರದಲ್ಲಿ ಅಗತ್ಯ ಸಂಖ್ಯೆ ಸಿಬ್ಬಂದಿ ನೇಮಕ ಅಧಿಕಾರವನ್ನೂ ಜಿಲ್ಲಾಡಳಿತಗಳಿಗೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ವಿವರಿಸಿದರು.

ಸಂಸದರಾದ ಜಿ.ಎಂ, ಸಿದ್ದೇಶ್ವರ್‌, ನಗರಪಾಲಿಕೆ ಮೇಯರ್‌ ಎಸ್‌,ಟಿ ವಿರೇಶ್‌, ಚನ್ನಗಿರಿ ಶಾಸಕರಾದ ಮಾಡಾಳು ವಿರುಪಾಕ್ಷಪ್ಪ, ದಾವಣಗೆರೆ ಶಾಸಕ ರವೀಂದ್ರನಾಥ್‌, ಮಾಯಕೊಂಡ ಶಾಸಕರಾದ ಪ್ರೊ.ಲಿಂಗಣ್ಣ, ಹರಿಹರ ಶಾಸಕರಾದ ಎಸ್. ರಾಮಪ್ಪ, ವಿಧಾನಪರಿಷತ್‌ ಸದಸ್ಯರಾದ ಭೋಜೇಗೌಡ, ಜಿಲ್ಲಾಧಿಕಾರಿ ಮಹಂತೇಶ್‌ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಮಹಂತೇಶ್‌, ಎಸ್ಪಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್‌ ಅವರು ಸಭೆಯಲ್ಲಿ ಹಾಜರಿದ್ದರು.

ಚಿಗಟೇರಿ ಆಸ್ಪತ್ರೆಗೆ ಭೇಟಿ

ಇದಕ್ಕೂ ಮೊದಲು ಬೆಳಗ್ಗೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಒಂದೂವರೆ ತಾಸಿಗೂ ಹೆಚ್ಚು ಕಾಲ ಕೋವಿಡ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಕಂಡು ಬಂದ ಲೋಪಗಳ ಬಗ್ಗೆ ಅಧಿಕಾರಿಗಳನ್ನುತರಾಟೆ ತೆಗೆದುಕೊಂಡ ಸಚಿವರು, ಎಲ್ಲಾ ಕೊರತೆಗಳನ್ನು ಒಂದೆರಡು ದಿನಗಳಲ್ಲಿ ನಿವಾರಿಸಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು

Tags: #saakshatvCoronacovid karnatakaCovid19covidindiadavanagerekarnataka
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram