ದೇಶದಲ್ಲಿ ನಿಲ್ಲದ ಕೊರೊನಾ ಮರಣಕೇಕೆ : ಕಳೆದ 24 ಗಂಟೇಲಿ 4,194 ಬಲಿ
ನವದೆಹಲಿ : ಭಾರತದಲ್ಲಿ ಕೊರೊನಾ ಮರಣಕೇಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,194 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,57,299 ಜನರಲ್ಲಿ ಸೋಂಕು ಪತ್ತೆಯಾಗಿದೆ.
4,194 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,62,89,290ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.
ಆಂಗ್ ಸಾನ್ ಸೂಕಿ ನೇತೃತ್ವದ ಪಕ್ಷದ ಮಾನ್ಯತೆ ರದ್ದು ಮಾಡಿದ ಮ್ಯಾನ್ಮಾರ್ ಚುನಾವಣಾ ಆಯೋಗ..!
ಇನ್ನು ಕಳೆದ 24 ಗಂಟೆಯಲ್ಲಿ 3,57,630 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೂ 2,30,70,365 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನೂ 29,23,400 ಕೋವಿಡ್ ಸಕ್ರಿಯ ಪ್ರಕರಣಗಳಿವೆ.









